ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm