ಬ್ರೇಕಿಂಗ್ ನ್ಯೂಸ್
08-05-24 04:35 pm Bengaluru Correspondent ಕ್ರೈಂ
ಬೆಂಗಳೂರು, ಮೇ 8: ಪೆನ್ ಡ್ರೈವ್ ಕೇಸಿಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಅಪಹರಿಸಿದ ಆರೋಪದಲ್ಲಿ ಬಂಧಿತರಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ನ್ಯಾಯಾಲಯ ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಪರಪ್ಪನ ಅಗ್ರಹಾರ ಸೇರುವುದು ಖಚಿತವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣರನ್ನು ಎರಡು ದಿನಗಳ ಹಿಂದೆ ಬಂಧಿಸಿದ್ದ ಎಸ್‌ಐಟಿ ಪೊಲೀಸರು ಮೇ 8ರ ವರೆಗೆ ಕಸ್ಟಡಿಗೆ ಪಡೆದಿದ್ದರು. ಇಂದು ಮತ್ತೆ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರಕುಮಾರ್ ಬಿ. ಕಟ್ಟಿಮನಿ ಮುಂದೆ ಹಾಜರುಪಡಿಸಿದರು. ರೇವಣ್ಣ ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ, ಅವರನ್ನು ಮತ್ತೆ ಎಸ್‌ಐಟಿ ವಶಕ್ಕೆ ನೀಡಬೇಕು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್ ಜಗದೀಶ್ ಎಸ್ಐಟಿ ಪರವಾಗಿ ಅಹವಾಲು ಸಲ್ಲಿಸಿದರು. ಇದಕ್ಕೆ ಒಪ್ಪದ ನ್ಯಾಯಾಧೀಶರು ರೇವಣ್ಣರನ್ನು ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗೆ ಕಳಿಸಿಕೊಟ್ಟರು.
ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್ ವಾದಕ್ಕೆ ಪುರಸ್ಕಾರ ಸಿಗಲಿಲ್ಲ. ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ, ಎಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ನ್ಯಾಯಾಲಯ ಮೇ 9ರಂದು ವಿಚಾರಣೆ ನಡೆಸಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜಾಮೀನು ಅರ್ಜಿಯ ವಿಚಾರಣೆಯನ್ನು 9ಕ್ಕೆ ಮುಂದೂಡಿದ್ದಾರೆ.
In more trouble for Karnataka MLA HD Revanna, he has been sent to judicial custody till May 14 after the Special Investigation Team's custody in the case of allegedly kidnapping a woman ended on Wednesday.
13-01-25 10:48 am
Bangalore Correspondent
Minister Parameshwara, Yatnal: 'ನೀವು ಸಾಬರಿಗೆ...
11-01-25 10:53 pm
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
13-01-25 09:58 am
HK News Desk
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
13-01-25 10:48 am
Bengaluru correspondent
Historian Vikram Sampath, Lit Fest Mangalore...
12-01-25 11:03 pm
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm