ಬ್ರೇಕಿಂಗ್ ನ್ಯೂಸ್
09-05-24 07:17 pm Mangalore Correspondent ಕ್ರೈಂ
ಮಂಗಳೂರು, ಮೇ.9: ಸೈಬರ್ ವಂಚಕರು ಮೋಸ ಮಾಡುವುದರಲ್ಲಿಯೂ ದಿನದಿಂದ ದಿನಕ್ಕೆ ಹೊಸ ನಮೂನೆಯನ್ನು ಹುಡುಕಿಕೊಳ್ಳುತ್ತಿದ್ದಾರೆ. ಹಿಂದೆಲ್ಲಾ ಓಟಿಪಿ ಕೇಳಿ ಹಣ ಎಗರಿಸುತ್ತಿದ್ದರು. ಈಗೆಲ್ಲಾ ಸಿಬಿಐ, ಕ್ರೈಂ ಬ್ರಾಂಚ್ ಎಂದು ಹೇಳಿ ಜನರನ್ನು ಮೋಸ ಮಾಡಿ ಹಣ ಕೀಳುತ್ತಿದ್ದಾರೆ. ಮಂಗಳೂರಿನ 72 ವರ್ಷದ ವ್ಯಕ್ತಿಯೊಬ್ಬರನ್ನು ನಿಮ್ಮ ಹೆಸರಲ್ಲಿ ಥಾಯ್ಲೆಂಡಿಗೆ ಕಳಿಸಿದ ಪಾರ್ಸೆಲ್ ನಲ್ಲಿ ಡ್ರಗ್ಸ್ ಇದೆಯೆಂದು ಹೇಳಿ ಮುಂಬೈ ಕ್ರೈಂ ಬ್ರಾಂಚ್ ಅಧಿಕಾರಿಗಳ ಸೋಗಿನಲ್ಲಿ ಫೋನ್ ಮಾಡಿ ಬೆದರಿಸಿದ್ದಲ್ಲದೆ, ಬರೋಬ್ಬರಿ ಒಂದು ಕೋಟಿ 60 ಲಕ್ಷ ರೂಪಾಯಿ ಪೀಕಿಸಿ ದೋಖಾ ಮಾಡಿರುವುದು ಬೆಳಕಿಗೆ ಬಂದಿದೆ.
ಮಂಗಳೂರಿನ ಮಟ್ಟಿಗೆ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಹಣ ಸೈಬರ್ ವಂಚಕರ ಪಾಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ತನ್ನ ಹೆಸರನ್ನು ರಾಜೇಶ್ ಕುಮಾರ್ ಅಂತ ಪರಿಚಯಿಸಿಕೊಂಡು Fedex ಕಂಪನಿಯಿಂದ ಕರೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದ. ನೀವು ಮುಂಬೈನಿಂದ ಥಾಯ್ಲೆಂಡ್ ದೇಶಕ್ಕೆ ಒಂದು ಪಾರ್ಸೆಲ್ ಕಳಿಸಿದ್ದು, ಅದನ್ನು ಅಲ್ಲಿನ ಕಸ್ಟಮ್ಸ್ ನವರು ವಶಕ್ಕೆ ಪಡೆದಿದ್ದಾರೆ. ಸದ್ರಿ ಪಾರ್ಸೆಲ್ ನಲ್ಲಿ ಅಫ್ಘಾನ್ ಮತ್ತು ಕೀನ್ಯಾ ದೇಶದ ಐದು ಪಾಸ್ ಪೋರ್ಟ್ ಗಳು, ಮೂರು ಕ್ರೆಡಿಟ್ ಕಾರ್ಡ್ ಗಳು, 140 ಗ್ರಾಮ್ ಎಂಡಿಎಂಎ ಡ್ರಗ್ಸ್, 4 ಕೇಜಿ ಬಟ್ಟೆ ಹಾಗೂ ಒಂದು ಲ್ಯಾಪ್ಟಾಪ್ ಇರುವುದಾಗಿ ಹೇಳಿದ್ದು ಈ ಬಗ್ಗೆ ಮುಂಬೈ ಕ್ರೈಮ್ ಬ್ರಾಂಚ್ ನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾನೆ.
ಆನಂತರ, ಮುಂಬೈ ಕ್ರೈಮ್ ಬ್ರಾಂಚ್ ಅಧಿಕಾರಿಯೆಂದು ಹೇಳಿ ಇನ್ನೊಬ್ಬ ವ್ಯಕ್ತಿ ಮಾತನಾಡಿದ್ದು, ಈ ಬಗ್ಗೆ ನಿಮಗೆ ಹೆಚ್ಚುವರಿ ಮಾಹಿತಿಯನ್ನು ಸಿಬಿಐ ಅಧಿಕಾರಿ ರುದ್ರ ರಾಥೋಡ್ ನೀಡುತ್ತಾರೆ, ಅವರನ್ನು rathoreb@21 ಎಂಬ ಇಮೇಲ್ ಮೂಲಕ ಸಂಪರ್ಕಿಸುವಂತೆ ಹೇಳಿದ್ದರು. ಅದೇ ದಿನ ರುದ್ರ ರಾಥೋಡ್ ಎಂದು ತನ್ನನ್ನು ಪರಿಚಯಿಸಿದ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಪ್ರಕರಣದಲ್ಲಿ ಹಲವಾರು ಮಕ್ಕಳನ್ನು ಕೊಲೆಗೈದ ತಂಡವೊಂದು ಶಾಮೀಲಾಗಿದೆ. ನೀವು ನಮಗೆ ಸಹಕಾರ ನೀಡದೇ ಇದ್ದಲ್ಲಿ ವಿದೇಶದಲ್ಲಿರುವ ಇಂಟರ್ಪೋಲ್ ಮೂಲಕ ನಿಮ್ಮ ಮಗ ಮತ್ತು ಮಗಳನ್ನು ಬಂಧಿಸಬೇಕಾಗುತ್ತದೆ ಎಂದು ಭಯ ಹುಟ್ಟಿಸಿದ್ದಾನೆ.
ಹಡಗಿನಲ್ಲಿ ಇಂಜಿನಿಯರ್ ಆಗಿದ್ದು ನಿವೃತ್ತಿಯಾಗಿರುವ ಮಂಗಳೂರಿನ 72 ವರ್ಷದ ವ್ಯಕ್ತಿ ಸಿಬಿಐ ಅಧಿಕಾರಿಗಳ ಹೆಸರಲ್ಲಿ ಮಾಡಿದ್ದ ಮೋಸದ ಕರೆಯನ್ನು ತಿಳಿಯದೆ ಭಯಕ್ಕೀಡಾಗಿದ್ದರು. ಇವರಲ್ಲಿ ಭಯ ಹುಟ್ಟಿಸಿ, Skype ಏಪ್ ಮೂಲಕ ಖಾತೆಯನ್ನು ತೆರೆಯುವಂತೆ ಒತ್ತಾಯಪಡಿಸಿ ವಿಡಿಯೋ ಕರೆಯಲ್ಲಿ ಹೆದರಿಸಿದ್ದರು. ಸ್ಕೈಪ್ ಏಪ್ ನಲ್ಲಿ ಹಲವಾರು ಸಿಬಿಐನದ್ದೆಂದು ಹೇಳಿ ಹಲವಾರು ನೋಟೀಸ್ ಗಳನ್ನು ಕಳಿಸಿಕೊಟ್ಟಿದ್ದು, ನೀವು ಬಂಧನದಿಂದ ತಪ್ಪಿಸಿಕೊಳ್ಳಬೇಕಿದ್ದರೆ ಬಾಂಡ್ ರೂಪದಲ್ಲಿ ಹಣವನ್ನು ಪಾವತಿ ಮಾಡಲೇಬೇಕು ಎಂದು ಒತ್ತಾಯಿಸಿದ್ದ.
ಪ್ರಕರಣ ಮುಗಿದ ಕೂಡಲೇ ಹಣವನ್ನು ಮರು ಪಾವತಿ ಮಾಡಲಾಗುವುದೆಂದು ಭರವಸೆಯನ್ನೂ ನೀಡಿದ್ದ. ಈ ವ್ಯಕ್ತಿ ತನಗೆ ಮತ್ತು ಮಕ್ಕಳಿಗೇನೂ ಮಾಡಬೇಡಿ ಎಂದು ಹೇಳಿ ತನ್ನ ಐಸಿಐಸಿಐ ಬ್ಯಾಂಕ್ ಖಾತೆಯಿಂದ ಮೇ 2ರಂದು ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಪಾವತಿ ಮಾಡಿದ್ದಾರೆ. ಆನಂತರ, ಮೇ 6ರಂದು ಕ್ರೈಂ ಬ್ರಾಂಚ್ ಕಡೆಯಿಂದ ಫೋನ್ ಮಾಡಿದ್ದಕ್ಕಾಗಿ ಮತ್ತೆ 50 ಲಕ್ಷ ರೂಪಾಯಿ ಮೊತ್ತವನ್ನು ಅವರು ಹೇಳಿದ ಖಾತೆಗೆ ಪಾವತಿ ಮಾಡಿದ್ದಾರೆ. ಮರುದಿನ ಕರೆ ಮಾಡಿದರೆ, ಅಪರಿಚಿತರ ಕಡೆಯಿಂದ ಯಾವುದೇ ಸ್ಪಂದನೆ ಸಿಗದಿದ್ದರಿಂದ ಸಂಶಯದಿಂದ ತಮ್ಮ ಮಗಳಿಗೆ ಈ ವಿಷಯ ತಿಳಿಸಿದ್ದಾರೆ. ಮೋಸ ಹೋಗಿರುವುದು ತಿಳಿಯುತ್ತಲೇ ನಿವೃತ್ತ ಇಂಜಿನಿಯರ್ ಆಗಿರುವ ಆ ವ್ಯಕ್ತಿ ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಕುಳಿತಲ್ಲೇ ತಲೆ ಬೋಳಿಸುವ ವಂಚಕರು
ಇತ್ತೀಚೆಗೆ ಬೆಂಗಳೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 5.17 ಕೋಟಿ ರೂಪಾಯಿ ಮೊತ್ತವನ್ನು ಇದೇ ಮಾದರಿಯಲ್ಲಿ ಸಿಬಿಐ ಅಧಿಕಾರಿಗಳ ಸೋಗಿನ ಕರೆಗೆ ಭಯಬಿದ್ದು ಕಳಕೊಂಡಿದ್ದರು. ಒಂದು ವಾರದ ಹಿಂದೆ ಮಂಗಳೂರಿನ ಕಂಟ್ರಾಕ್ಟರ್ ಒಬ್ಬರು ಇದೇ ಮಾದರಿಯಲ್ಲಿ ಸಿಬಿಐ, ಪೊಲೀಸರ ಹೆಸರಲ್ಲಿ ಮಾಡಿದ್ದ ಕರೆಗೆ ಓಗೊಟ್ಟು ಲಕ್ಷಾಂತರ ರೂ. ಹಣ ಕಳಕೊಂಡಿದ್ದರು. ಹಿಂದೆಲ್ಲಾ ಓಟಿಪಿ ಕೇಳಿ ಪಡೆಯುವುದು, ಎಟಿಎಂ ಕಾರ್ಡ್ ಮಾಹಿತಿ ಕೇಳುವುದು, ಬ್ಯಾಂಕ್ ಖಾತೆಯ ಮಾಹಿತಿ ಕೇಳಿ ಮೋಸ ಮಾಡುವುದು ನಡೆಯುವುದಿತ್ತು. ಆದರೆ, ಈಗ ಮೋಸಗಾರರು ಪೊಲೀಸರು, ಸಿಬಿಐ, ಕ್ರೈಂ ಬ್ರಾಂಚ್ ಇತ್ಯಾದಿ ದೇಶದ ಮುಂಚೂಣಿ ತನಿಖಾ ಸಂಸ್ಥೆಗಳ ಹೆಸರಲ್ಲಿ ಫೋನ್ ಕರೆ ಮಾಡಿ ವಂಚಿಸುತ್ತಿದ್ದಾರೆ. ಹಣ ಇದ್ದವರನ್ನು ಮತ್ತು ವಯಸ್ಸಾದ ವ್ಯಕ್ತಿಗಳನ್ನೇ ಈ ರೀತಿ ಟಾರ್ಗೆಟ್ ಮಾಡಿ, ಬೆದರಿಸಿ ಹಣ ಕೀಳುತ್ತಿರುವುದು ವಂಚಕರ ಹೊಸ ನಮೂನೆಯಾಗಿದೆ. ಇದರಲ್ಲಿ ಆಂಡ್ರಾಯ್ಡ್ ಮೊಬೈಲ್ ಪಾಲು ಒಂದು ಕಡೆಯಿದ್ದರೆ, ಬ್ಯಾಂಕ್ ಅಧಿಕಾರಿಗಳದ್ದೂ ಪಾಲಿರುವ ಶಂಕೆಯಿದೆ. ಸೈಬರ್ ವಂಚಕರ ಜಾಲದ ಬಗ್ಗೆ ನಮ್ಮ ಪೊಲೀಸರು ನಿರ್ಲಕ್ಷ್ಯ ವಹಿಸುವುದು, ಸರಕಾರ ಸರಿಯಾದ ಕಾನೂನು ರೂಪಿಸದೇ ಇರುವುದು ಕುಳಿತಲ್ಲೇ ತಲೆಬೋಳಿಸುವ ವಂಚಕರ ಕರಾಮತ್ತಿಗೆ ಕಡಿವಾಣ ಇಲ್ಲದಾಗಿದೆ.
Mangalore cyber fraud, man looses 1 crore 60 lakhs for CBI scam online. A case has been reported at the cyber crime police station in Mangalore. Fraudters who introduced themselves as CBI officers threatened of a drug parcel and duped of him crores.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm