ಬ್ರೇಕಿಂಗ್ ನ್ಯೂಸ್
10-05-24 10:16 am HK News Desk ಕ್ರೈಂ
ಕೊಡಗು, ಮೇ.10: ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸೋ ಭೀಕರ ಕೊಲೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಇಡೀ ಎಸ್ ಎಸ್ ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ 100% ಫಲಿತಾಂಶ ತಂದುಕೊಟ್ಟಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಾಲಕಿಯ ತಲೆಯನ್ನೇ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಕೀಚಕ ವಿಕೃತಿ ಮೆರೆದಿದ್ದಾನೆ.
ಮೃತ ವಿದ್ಯಾರ್ಥಿನಿ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ಸಿ ವ್ಯಾಸಂಗ ಮಾಡುತ್ತಿದ್ದಳು. ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸ್ ಆಗಿದ್ದ ಪರಿಣಾಮ ಶೇಕಡಾ 100 ರಷ್ಟು ಫಲಿತಾಂಶ ಲಭ್ಯವಾಗಿತ್ತು. ಬೆಳಗ್ಗೆ SSLC ಪಾಸ್ ಆಗಿದ್ದ ಖುಷಿಯಲ್ಲಿದ್ದ ಸೂರ್ಲಬ್ಬಿ ಗ್ರಾಮದ ಬಾಲಕಿಯನ್ನು 35 ವರ್ಷದ ಓಂಕಾರಪ್ಪ ಎಂಬಾತ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಇನ್ನು, ಎಸ್ ಎಸ್ ಎಲ್ಸಿ ಪಾಸ್ ಆಗಿದ್ದ ವಿದ್ಯಾರ್ಥಿನಿಗೆ ಆರೋಪಿಯೊಂದಿಗೆ ನಿನ್ನೆ ನಿಶ್ಚಿತಾರ್ಥ ಫಿಕ್ಸ್ ಮಾಡಿದ್ದರಂತೆ. ಆದರೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಅಪ್ರಾಪ್ತ ಬಾಲಕಿ ಆಗಿರುವ ಕಾರಣ ನಿಶ್ಚಿತಾರ್ಥ ನಿಲ್ಲಿಸಿದ್ದಂತೆ. ಘಟನೆ ಬಳಿಕ ಬಾಲಕಿಯನ್ನು ಆಕೆಯ ಪೋಷಕರು ಮನೆಗೆ ವಾಪಸ್ ಕರೆ ತಂದಿದ್ದರಂತೆ. ಆರೋಪಿ ಕೂಡ ಮನೆಗೆ ವಾಪಸ್ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬಳಿಕ ನಿನ್ನೆ ಸಂಜೆ ಮನೆಗೆ ಬಂದಿದ್ದ ಆರೋಪಿ ಬಾಲಕಿಯೊಂದಿಗೆ ಮಾತನಾಡಬೇಕು ಎಂದು ಪೋಷಕರಿಗೆ ಹೇಳಿ ಮನೆಯಿಂದ ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿದ್ದನಂತೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ತಲೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.
ವಿದ್ಯಾರ್ಥಿನಿ ತಲೆ ಕತ್ತರಿಸಿ ರುಂಡ ಮುಂಡ ಬೇರೆ ಮಾಡಿ ರುಂಡ ಒಂದು ಕಡೆ ಮುಂಡ ಒಂದು ಕಡೆ ಬಿಸಾಡಿ ಆರೋಪಿ ಎಸ್ಕೇಪ್ ಆಗಿದ್ದಾನಂತೆ. ಸದ್ಯ ಅಪ್ರಾಪ್ತ ಬಾಲಕಿ ಹತ್ಯೆ ಬಗ್ಗೆ ಕೊಡಗು ಪೋಲಿಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಕೊಡಗು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಮೃತದೇಹ ಮಡಿಕೇರಿ ಜಿಲ್ಲಾಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಿದ್ದು, ಮರಣೋತ್ತರ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
A tenth grade girl was brutally murdered by a 30-year-old man in Kodagu. In the heinous incident, the man cut off the victim's head and threw away her body. The incident was reported at Surlabbi under Madikeri Taluk in Karnataka's Kodagu district.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm