ಬ್ರೇಕಿಂಗ್ ನ್ಯೂಸ್
10-05-24 11:53 am Mangalore Correspondent ಕ್ರೈಂ
ಮಂಗಳೂರು, ಮೇ.10: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ನನ್ನು ಎನ್ಐಎ ಅಧಿಕಾರಿಗಳು ಕಡೆಗೂ ಸಕಲೇಶಪುರದಲ್ಲಿ ಪತ್ತೆ ಮಾಡಿದ್ದಾರೆ. ಸಕಲೇಶಪುರ ಬಳಿಯ ಆನೆಮಹಲ್ ಎಂಬಲ್ಲಿನ ಕಾಫಿ ಎಸ್ಟೇಟಿನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮುಸ್ತಫಾ ಪೈಚಾರ್ ನನ್ನು ಎತ್ತೊಯ್ದಿದ್ದಾರೆ.
ಆನೆಮಹಲ್ ಸಿರಾಜ್ ಎಂಬಾತನ ಜೊತೆಗೆ ಕಾಫಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಿರಾಜ್, ಮುಸ್ತಫಾ ಪೈಚಾರ್ ಮತ್ತು ಇವರ ಜೊತೆಗಿದ್ದ ಸೋಮವಾರ ಪೇಟೆ ಮೂಲದ ಇಲಿಯಾಸ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಮುಸ್ತಫಾ ಪೈಚಾರ್ ಸುಳ್ಯದ ಶಾಂತಿನಗರ ನಿವಾಸಿಯಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಯ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆನಂತರ, ಇದೇ ಜಾಗದಲ್ಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. ಆರೋಪಿಗೆ ಆಶ್ರಯ ನೀಡಿದ್ದಕ್ಕಾಗಿ ಸಿರಾಜ್ ಮತ್ತು ಇಲಿಯಾಸ್ ನನ್ನು ವಶಕ್ಕೆ ಪಡೆಯಲಾಗಿದೆ. ಮುಸ್ತಫಾ ಪೈಚಾರ್ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದು, ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ನಡೆಸಿದವರಲ್ಲಿ ಪ್ರಮುಖನಾಗಿದ್ದ. ಈತನ ಪತ್ತೆಗಾಗಿ ಎನ್ಐಎ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಪ್ರಕರಣ ಸಂಬಂಧಿಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು.
NIA arrests Mustafa Paichar, key accused in BJP activist Praveen Nettaru sullia murder. The accused, Mustafa Paichar was arrested by NIA officials from his hideout in Karnataka, said sources. Praveen Nettaru was hacked to death by two bike-borne attackers on July 26, 2022, in Bellare village of Dakshina Kannada district in Karnataka
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm