ಬ್ರೇಕಿಂಗ್ ನ್ಯೂಸ್
16-05-24 06:32 pm Bangalore Correspondent ಕ್ರೈಂ
ಬೆಂಗಳೂರು, ಮೇ.16: ದೇಶದ ವಿರುದ್ಧ ಬೇಹುಗಾರಿಕೆ ನಡೆಸಿದ ಪ್ರಕರಣದಲ್ಲಿ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ.
ಮೈಸೂರಿನ ರಾಜೀವ್ ನಗರದ ನಿವಾಸಿ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ಭಾರತದಲ್ಲಿ ನಕಲಿ ನೋಟು ಪೂರೈಕೆ, ಪಾಕಿಸ್ತಾನದ ಪರ ಬೇಹುಗಾರಿಕೆ, ವಿದೇಶಿ ರಾಯಭಾರ ಕಚೇರಿಗಳ ಸ್ಫೋಟ ಸಂಚು ಮುಂತಾದ ಆರೋಪಗಳಿದ್ದ ಹಿನ್ನೆಲೆಯಲ್ಲಿ ಎನ್ ಐಎ ವಿಶೇಷ ನ್ಯಾಯಾಲಯ ಸರ್ಚ್ ವಾರಂಟ್ ಹೊರಡಿಸಿತ್ತು. ಆದರೆ ಹಾಜರಾಗದೆ ನೂರುದ್ದೀನ್ ಅಧಿಕಾರಿಗಳಿಗೆ ಸಿಗದೆ ತಲೆಮರೆಸಿಕೊಂಡಿದ್ದ.
ಬುಧವಾರ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ರಾಜೀವ್ ನಗರದ ಆರೋಪಿ ಮನೆಯಿಂದಲೇ ಹೆಡೆಮುರಿ ಕಟ್ಟಿದ್ದಾರೆ. ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್ ಡ್ರೈವ್ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕಾ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪ ಈತನ ಮೇಲಿದೆ. ಇದೇ ಆರೋಪದ ಮೇಲೆ ಶ್ರೀಲಂಕಾ ಪ್ರಜೆ ಮೊಹಮ್ಮದ್ ಶಕೀರ್ ಹುಸೇನ್ ಹಾಗೂ ಕೊಲಂಬೋದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು.
The National Investigation Agency (NIA) on Wednesday arrested an accused, who had been absconding after jumping bail, in an espionage case involving a Sri Lankan and a Pakistani national. The accused, identified as Nuruddin alias Rafi, was carrying a cash reward of Rs five lakh, and was arrested from the Rajiv Nagar area of Karnataka's Mysuru, by an NIA team, an official statement by the agency said.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm