ಬ್ರೇಕಿಂಗ್ ನ್ಯೂಸ್
17-05-24 01:44 pm HK News Desk ಕ್ರೈಂ
ಬೆಳಗಾವಿ, ಮೇ.17: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬ ಚಾಕುವಿನಿಂದ ನಡೆಸಿದ ದಾಳಿಯಲ್ಲಿ ರೈಲ್ವೆ ಸಿಬ್ಬಂದಿ ಮೃತಪಟ್ಟಿದ್ದು, ಟಿಟಿಇ ಸೇರಿ ಮೂವರು ಗಾಯಗೊಂಡಿದ್ದಾರೆ.
ಬೋಗಿ ಅಟೆಂಡರ್ ದೇವಋಷಿ ವರ್ಮಾ (23) ಮೃತಪಟ್ಟವರು. ಆರೋಪಿಯು ಹೃದಯಕ್ಕೇ ಚಾಕು ಇರಿದಿದ್ದರಿಂದ ವರ್ಮಾ ತೀವ್ರ ನಿತ್ರಾಣಗೊಂಡರು. ಅವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಪುದುಚೆರಿ- ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್ ರೈಲಿನ ಎಸ್-8 ಬೋಗಿಯಲ್ಲಿ ಘಟನೆ ನಡೆದಿದೆ. ರೈಲುಧಾರವಾಡ ದಾಟಿ ಬೆಳಗಾವಿಯತ್ತ ಚಲಿಸುತ್ತಿತ್ತು. ಗುಂಜಿ-ಖಾನಾಪುರ ಮಧ್ಯದಲ್ಲಿ ಟಿಟಿ ಅಶ್ರಫ್ ಕಿತ್ತೂರ ಟಿಕೆಟ್ ಚೆಕ್ ಮಾಡುತ್ತಿದ್ದರು. ಬೋಗಿಯಲ್ಲಿ ಮುಸುಕು ಧರಿಸಿ ಕುಳಿತಿದ್ದ ವ್ಯಕ್ತಿಯಿಂದ ಟಿಕೆಟ್ ಕೇಳಿದರು. ಅವರಿಗೆ ಟಿಕೆಟ್ ತೋರಿಸಲು ನಿರಾಕರಿಸಿದಾಗ ಮಾತಿಗೆ ಮಾತು ಬೆಳೆಯಿತು. ತನ್ನ ಬಳಿ ಇದ್ದ ಚಾಕು ತೆಗೆದ ಮುಸುಕುಧಾರಿ ಟಿಟಿ ಮೇಲೆ ಹಲ್ಲೆ ನಡೆಸಿದ. ಗಾಯಗೊಂಡ ಟಿಟಿಇ ಅವರನ್ನು ರಕ್ಷಿಸಲು ಅಟೆಂಡರ್ ದೇವಋಷಿ ಧಾವಿಸಿದರು. ಆರೋಪಿ ಅವರ ಎದೆಗೂ ಚಾಕು ಇರಿದ. ಜಗಳ ಬಿಡಿಸಲು ಬಂದ ಇನ್ನಿಬ್ಬರು ಸಿಬ್ಬಂದಿ ಮೇಲೂ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ರೈಲು ಸಂಜೆ 5ರ ಸುಮಾರಿಗೆ ಬೆಳಗಾವಿ ನಿಲ್ದಾಣ ತಲುಪಿತು. ಗಾಯಗೊಂಡ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ರಕ್ತಸ್ರಾವವಾಗಿದ್ದರಿಂದ ದೇವಋಷಿ ಅಸುನೀಗಿದರು. ಟಿಟಿ ಸೇರಿ ಮೂವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಆರೋಪಿ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿಯಾಗಿದ್ದಾನೆ.
ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಜಿಲ್ಲಾಸ್ಪತ್ರೆಗೆ ಹಾಗೂ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ದೇವಋಷಿ ಅವರ ಮರಣೋತ್ತರ ಪರೀಕ್ಷೆ ಮಾಡಿ, ಶವವನ್ನು ಇಲಾಖೆಯ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ.
ದೇವಋಷಿ ಹೊರಗುತ್ತಿಗೆ ಆಧಾರದ ಮೇಲೆ ಬೋಗಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
Ticketless Passenger Murders Railway Staffer, attack Tc for asking ticket in belagavi and later jumps from moving train. According to Belagavi Police Commissioner Iada Martin Marbaniang, the passenger picked up an argument with the TTE when he was asked to show his ticket. The accused then pulled out a knife and attacked the staffer.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm