ಬ್ರೇಕಿಂಗ್ ನ್ಯೂಸ್
21-05-24 05:52 pm HK News Desk ಕ್ರೈಂ
ಮುಂಬೈ, ಮೇ 21: ಮಹಾರಾಷ್ಟ್ರದಲ್ಲಿ 13 ವರ್ಷದ ಬಾಲಕನೊಬ್ಬ ಮೊಬೈಲ್ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ ಲೈಂಗಿಕತೆ ಬಗ್ಗೆ ಆಸಕ್ತಿ ಬೆಳೆಸಿಕೊಂಡು 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ.
ಬಾಲಕ ನಿರಂತರ ಅತ್ಯಾಚಾರ ಲ ಎಸಗಿದ ಪರಿಣಾಮ ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿದ್ದ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್ ಆಸ್ಪತ್ರೆಗೆ ಕರೆತಂದಿದ್ದು ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಿಳಿದ ಪೊಲೀಸರು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಡಿಸೆಂಬರ್ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್ ಮಾಡಲು ಪ್ರಯತ್ನಿಸಿದ್ದಾರೆ. ಜನವರಿಯಲ್ಲಿ ಬಾಲಕ ಮತ್ತೆ ವಿಡಿಯೋಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿರಲಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ.
ಬಾಲಕನ ವಿರುದ್ಧ ಪೋಕ್ಸೊ ಕೇಸು ಸೇರಿದಂತೆ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣವನ್ನು ಖಂಡೇಶ್ವರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಮಕ್ಕಳ ಕಲ್ಯಾಣ ಆಯೊಗವು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. ಮಕ್ಕಳಿಗೆ ಮೊಬೈಲ್ ಕೊಡಬಾರದು, ಕೊಟ್ಟರೂ ಅವರ ಬಗ್ಗೆ ನಿಗಾ ಇಡಬೇಕು ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದರೂ ನಗರ ಪ್ರದೇಶಗಳಲ್ಲಿ ಇಂತಹ ವೈರುಧ್ಯಕಾರಿ ಬೆಳವಣಿಗೆ ಆಗುತ್ತಿದೆ.
Police in Navi Mumbai booked a 13-year-old boy under IPC and POCSO after his parents arrived to a hospital to terminate the three-month old pregnancy of his 15-year-old sister. The minor girl in her statement to the cops alleged that her younger brother impregnated her after the siblings watched porn together.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm