ಬ್ರೇಕಿಂಗ್ ನ್ಯೂಸ್
30-05-24 04:00 pm HK News Desk ಕ್ರೈಂ
ಶಿವಮೊಗ್ಗ, ಮೇ 30: ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ.
ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳ ಗಾಜುಗಳನ್ನು ರಾತ್ರೋ ರಾತ್ರಿ ಪುಂಡರ ತಂಡ ಹಾನಿ ಮಾಡಿದೆ.



ಅಷ್ಟು ಮಾತ್ರವಲ್ಲದೆ ಜಗದೀಶ್ ಅವರಿಗೆ ಸೇರಿದ ಅಂಗಡಿ ಬೀಗ ಮಚ್ಚಿನಿಂದ ಹಾನಿಗೊಳಿಸಲಾಗಿದೆ. ಸಂದೇಶ್ ಅವರಿಗೆ ಸೇರಿದ ಹುಂಡೈ ಸ್ಯಾಂಟ್ರೋ ಕಾರು ಜಖಂಗೊಂಡಿದೆ. ಮಂಜು, ಲಿಂಗರಾಜು ಅವರಿಗೆ ಸೇರಿದ ಎರಡು ಆಟೋಗಳೂ ಕೂಡ ಜಖಂಗೊಂಡಿದೆ. ಅಲ್ಲದೆ ಸಿದ್ದಪ್ಪ, ಜಗದೀಶ್, ಚಂದ್ರಪ್ಪ ಸೇರಿದಂತೆ ನಾಲ್ವರ ಬೈಕ್ ಜಖಂಗೊಂಡಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುಂಡರ ಪತ್ತೆಗೆ ಬಲೆ ಬಿಸಿದ್ದಾರೆ.
ವಾಹನಗಳನ್ನು ಜಖಂಗೊಳಿಸಲಾದ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದರು.
ಹೊಸಮನೆ ಬಡಾವಣೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲಲ್ಲ. ಕಳೆದ ಒಂದು ವರ್ಷದಲ್ಲಿ ಇದು ಎರಡನೇ ಘಟನೆ. ಗಾಂಜಾ ಸೇವಿಸುವ ಪುಂಡರ ಗುಂಪು ಈ ಭಾಗದಲ್ಲಿ ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗುತ್ತಿದೆ. ನಶೆಯಲ್ಲಿ ಮನಸೋಇಚ್ಛೆ ಬೈಕ್‌ನಲ್ಲಿ ಸುತ್ತುವುದು, ಬೆದರಿಸುವುದು, ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Miscreants vandalise car bike auto glass in Shivamogga after being intoxicated with drugs. MLA channabasappa visiting the spot slam the police officers for showing negligence in arresting such miscreants
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm