ಬ್ರೇಕಿಂಗ್ ನ್ಯೂಸ್
31-05-24 10:31 pm HK News Desk ಕ್ರೈಂ
ಕಣ್ಣೂರು, ಮೇ 31: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಗಗನಸಖಿಯನ್ನ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ ಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.
ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.
ಇನ್ನು ಗಗನಸಖಿಯೊಬ್ಬಳು ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಅಕ್ರಮ ಸಾಗಾಟ ಮಾಡಿರುವುದು ಇದೇ ಮೊದಲ ಪ್ರಕರಣ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಸಂಗತಿ ಏನೆಂದರೆ, ಗಗನಸಖಿ ಸುರಭಿ ಗುದನಾಳದಲ್ಲಿ ಒಂದು ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ವಿಶೇಷ ತರಬೇತಿ ಪಡೆದಿದ್ದಳು ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ತರಬೇತಿ ಪಡೆಯದ ವ್ಯಕ್ತಿ ಗುದನಾಳದಲ್ಲಿ ಅಷ್ಟು ಪ್ರಮಾಣ ಚಿನ್ನವನ್ನು ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ, ಸುರಭಿಯ ನಡೆ ಅಥವಾ ನಡವಳಿಕೆಯಲ್ಲಿ ಯಾವುದೇ ಅಸಹಜತೆ ಇರಲಿಲ್ಲ ಎಂದು ವರದಿಯಾಗಿದೆ.
ಗುದನಾಳದಲ್ಲಿ ಚಿನ್ನ ಬಚ್ಚಿಡಲು ವಿಶೇಷ ತರಬೇತಿ ;
ತಮ್ಮ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಡಲು ಮಹಿಳೆಯರಿಗೆ ವಿಶೇಷ ತರಬೇತಿ ನೀಡುವ ಗುಂಪುಗಳಿವೆ ಎಂಬ ವರದಿಗಳು ಈ ಹಿಂದೆಯೇ ಹೊರಬಿದ್ದಿದ್ದವು. ಕಾಂಡೋಮ್ ಒಳಗೆ ಚಿನ್ನವನ್ನು ಇಟ್ಟು ದೇಹದೊಳಗೆ ಇರಿಸಲಾಗುತ್ತದೆ. ಗಂಟೆಗಳ ಕಾಲ ದೇಹದಲ್ಲಿ ಇಟ್ಟುಕೊಳ್ಳಲು ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
ಡಿಆರ್‌ಐ ಮೂಲಗಳ ಪ್ರಕಾರ, ಆರೋಪಿ ಸುರಭಿ ಈ ಹಿಂದೆಯು ಚಿನ್ನ ಕಳ್ಳಸಾಗಣೆಯ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಸಂಶಯ ವ್ಯಕ್ತವಾಗಿದೆ. ಹೀಗಾಗಿ ತನಿಖೆ ನಡೆಸಲು ಸೂಚಿಸಲಾಗಿದೆ. ಆಕೆಯ ಸಹಚರರನ್ನು ಗುರುತಿಸಲು ಮತ್ತು ಚಿನ್ನ ಕಳ್ಳಸಾಗಣೆ ಜಾಲವನ್ನು ಪತ್ತೆಹಚ್ಚುವ ಪ್ರಯತ್ನಗಳು ಸಹ ನಡೆಯುತ್ತಿವೆ. ಈ ವಿಷಯದ ಬಗ್ಗೆ ಸಮಗ್ರ ತನಿಖೆಯ ಭಾಗವಾಗಿ ಹೆಚ್ಚಿನ ವಿಚಾರಣೆ ನಡೆಸಲು ಅನುಕೂಲವಾಗುವಂತೆ ಕ್ಯಾಬಿನ್ ಸಿಬ್ಬಂದಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಡಿಆರ್‌ಐ ಮುಂದಾಗಿದೆ.
ಸುರಭಿ, ಕಳ್ಳಸಾಗಣೆ ಚಟುವಟಿಕೆಗಳಿಗೆ ತನ್ನನ್ನು ನೇಮಿಸಿಕೊಂಡ ಕೆಲವು ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಚಿನ್ನವನ್ನು ಯಶಸ್ವಿಯಾಗಿ ಕಳ್ಳಸಾಗಣೆ ಮಾಡಿದ್ದಕ್ಕೆ ಆಕೆಗೆ ಒಳ್ಳೆಯ ಕಮಿಷನ್ ಸಹ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಹೆಚ್ಚಿನ ಕ್ಯಾಬಿನ್ ಸಿಬ್ಬಂದಿ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ತಿಳಿದುಕೊಳ್ಳಲು ಡಿಆರ್‌ಐ ಪರಿಶೀಲನೆ ನಡೆಸುತ್ತಿದೆ. ಸುರಭಿಯ ಬಂಧನದ ನಂತರ, ಡಿಆರ್‌ಐ ಅಧಿಕಾರಿಗಳು ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಹೆಚ್ಚಿನ ಕ್ಯಾಬಿನ್ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದು, ಈ ವೇಳೆ ಕಳ್ಳಸಾಗಾಣಿಕೆಯಲ್ಲಿ ಹೆಚ್ಚಿನ ಸಿಬ್ಬಂದಿ ಭಾಗಿಯಾಗಿರುವ ಬಗ್ಗೆ ವಿವರಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
A female air hostess was apprehended at Kannur Airport in Kerala on allegations of gold smuggling, as per sources from the Directorate of Revenue Intelligence (DRI) on Friday May 31. Identified as Surabhi Khatun, the air hostess was discovered to have concealed approximately 960 grams of gold in her rectum. She serves as a cabin crew member for Air India Express and was aboard the flight from Muscat that arrived in Kannur on May 28.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm