ಬ್ರೇಕಿಂಗ್ ನ್ಯೂಸ್
03-06-24 11:41 am Udupi Correspondent ಕ್ರೈಂ
ಉಡುಪಿ, ಜೂ. 03: ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿನಲ್ಲಿ ನಿರಂತರ ಅತ್ಯಾಚಾರ ಮಾಡಿರೋ ಪ್ರಕರಣ ದಾಖಲಾಗಿದೆ.
ಅಷ್ಟೇ ಅಲ್ಲ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಪರಾರಿ ಆಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
25 ವರ್ಷದ ಉದ್ಯಮಿ ಶ್ರೇಯಸ್ ನಾಯ್ಕ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಮೇ 18ರಂದು ಪ್ರಕರಣ ದಾಖಲಾಗಿದ್ದು, ಶ್ರೇಯಸ್ ನಾಯ್ಕ್ ತಲೆಮರೆಸಿಕೊಂಡಿದ್ದಾನೆ.
ಶಾಲೆಗೆ ಹೋಗುವ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಶ್ರೇಯಸ್ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನ ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಈಗ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಎಸಗಿ ಅದರ ವಿಡಿಯೋ ಮಾಡಿ ಬಾಲಕಿಯನ್ನ ಹೆದರಿಸಿ ಪದೇ ಪದೇ ಅತ್ಯಾಚಾರ ಎಸಗುತ್ತಿದ್ದ ಆರೋಪ ಕೇಳಿಬಂದಿದೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಈಗ ಬೆಳಕಿಗೆ ಬಂದಿದೆ.
ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಕುಂದಾಪುರ ತಾಲೂಕಿನ ಅಮಾಸೈಬೈಲ್ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಸಂತ್ರಸ್ತೆಯ ಹೇಳಿಕೆಯನ್ನು ಆಧರಿಸಿ ಸೈಬರ್ ಪೊಲೀಸರು ಆರೋಪಿ ಮನೆಯಿಂದ ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಲ್ಯಾಪ್‌ಟಾಪ್‌ಗೆ ಪಾಸ್‌ವರ್ಡ್ ಹಾಕಿದ್ದು, ವಿಡಿಯೋಗಳನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಮೇ18 ರಂದು ಆರೋಪಿ ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಲೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.
Kundapur 23 year old Shreyas a businessman runs after rape complaint filed, it is alleged that he was targetting school girls Take them in car and then have sex with them.
13-01-25 10:30 pm
HK News Desk
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
Minister Parameshwara, Yatnal: 'ನೀವು ಸಾಬರಿಗೆ...
11-01-25 10:53 pm
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
13-01-25 10:49 pm
HK News Desk
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
13-01-25 09:08 pm
Mangalore Correspondent
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
Historian Vikram Sampath, Lit Fest Mangalore...
12-01-25 11:03 pm
PLD bank election, MLA Ashok Rai, Puttur: ಪಿಎ...
12-01-25 10:06 pm
13-01-25 03:30 pm
Mangaluru Correspondent
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am