Bangalore crime, Murder: ಕಾಯಿಲೆ ಬಿದ್ದ ಅಜ್ಜಿಯನ್ನ ನೋಡಿಕೊಳ್ಳುವ ವಿಚಾರದಲ್ಲಿ ಗಲಾಟೆ ; ಜಗಳ ಬಿಡಿಸಲು ಹೋದ ಮಗನಿಗೆ ಚೂರಿ ಇರಿದ ತಂದೆ 

05-06-24 09:26 pm       Bangalore Correspondent   ಕ್ರೈಂ

ಗಂಡ- ಹೆಂಡತಿ ಜಗಳ ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ. ಇನ್‌ಫೋಸಿಸ್‌ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡ್ತಿದ್ದ ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಬೆಂಗಳೂರು, ಜೂ 05: ಗಂಡ- ಹೆಂಡತಿ ಜಗಳ ಆಕಸ್ಮಿಕವಾಗಿ ಮಗನ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಜರಗನಹಳ್ಳಿಯಲ್ಲಿ ನಡೆದಿದೆ.
ಇನ್‌ಫೋಸಿಸ್‌ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡ್ತಿದ್ದ ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ.

ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ.

ಯಶವಂತ ಉತ್ತಮ ವ್ಯಕ್ತಿತ್ವ ಹೊಂದಿದ್ದ ಹುಡುಗ. ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ. ಆತನ ಆಸೆಯಂತೆ ಕುಟುಂಬಸ್ಥರು‌ ಯಶವಂತನ ಕಣ್ಣುಗಳನ್ನು ದಾನ ಮಾಡಿದ್ದಾರೆ” ಎಂದು ಸಂಬಂಧಿ ರಾಕೇಶ್ ಮಾಹಿತಿ ನೀಡಿದ್ದಾರೆ. 

ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. “ಪುಟ್ಟೇನಹಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ 23 ವರ್ಷದ ಯುವಕನ ಕೊಲೆಯಾಗಿದೆ. ಗಂಡ ಹೆಂಡತಿ ಹೊಡೆದಾಡುತ್ತಿದ್ದಾಗ ಬಿಡಿಸಲು ಹೋಗಿದ್ದಾನೆ. ಈ ವೇಳೆ ತಂದೆ ಚಾಕು ತಂದು ಹೆದರಿಸಲು ಹೋಗಿದ್ದ. ಯುವಕ ಆಸ್ಪತ್ರೆ ಮಾರ್ಗ‌ಮಧ್ಯೆ ಸಾವನ್ನಪ್ಪಿದ್ದಾನೆ” ಎಂದು ದಕ್ಷಿಣ ವಿಭಾಗ ಡಿಸಿಪಿ ಲೊಕೇಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

23 year old software engineer stabbed by father during fight at home in Bangalore. The diseased has been identified as Yashwant. His father and mother were fighting  over looking after their grandmother who is sick, during which when son came to stop the fight he was stabbed by his father.