ಬ್ರೇಕಿಂಗ್ ನ್ಯೂಸ್
08-06-24 10:27 pm Mangalore Correspondent ಕ್ರೈಂ
ಉಳ್ಳಾಲ, ಜೂ.8: ನೇಪಾಳ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತ ಬಾಲಕಿ.
ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನಾ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನ ಮಂಗಳೂರಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸೋದಾಗಿ ಹಠ ಹಿಡಿದಿದ್ದು ಈ ಬಗ್ಗೆ ಪೋಷಕರಲ್ಲಿ ಗಲಾಟೆ ನಡೆಸುತ್ತಿದ್ದಳು ಎನ್ನಲಾಗಿದೆ.

ಶನಿವಾರ ಮಧ್ಯಾಹ್ನ ರಬೀನಳ ತಾಯಿ ರಮೀಲ ಅವರು ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆತರಲು ಹೋಗಿದ್ದ ವೇಳೆ ರಬೀನಾ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಳ್ಳಾಲ ಠಾಣೆ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ರಬೀನ ತಂದೆ, ತಾಯಿ, ಇಬ್ಬರು ಸಹೋದರಿಯರು, ಓರ್ವ ಸಹೋದರನನ್ನ ಅಗಲಿದ್ದಾಳೆ.
16 year old girl from Nepal commits suicide at Thokottu in Mangalore. The deceased has been identified as Rabina. She wanted to continue her studies at Nepal for which her parents were objecting and asked her to study here in Mangalore for which she has taken this extreme step it is said.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 07:18 pm
HK News Staffer
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am