ಬ್ರೇಕಿಂಗ್ ನ್ಯೂಸ್
10-06-24 12:20 pm Mangalore Correspondent ಕ್ರೈಂ
ಉಳ್ಳಾಲ, ಜೂ.9: ಪ್ರಧಾನಿ ಮೋದಿ ಪ್ರಮಾಣ ವಚನದ ಹಿನ್ನೆಲೆ ಬೋಳಿಯಾರ್ ನಲ್ಲಿ ನಿನ್ನೆ ರಾತ್ರಿ ನಡೆದ ವಿಜಯೋತ್ಸವದಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಅನ್ಯಕೋಮಿನ ಗುಂಪೊಂದು ಇರಿದಿದ್ದು ಕೊಣಾಜೆ ಪೊಲೀಸರು ಶಂಕಿತ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೋದಿ ಮೂರನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರದ ನಿಮಿತ್ತ ಬೋಳಿಯಾರು ಬಳಿ ಬಿಜೆಪಿ ಕಾರ್ಯಕರ್ತರು ಭಾನುವಾರ ಸಂಜೆ ವಿಜಯೋತ್ಸವ ಆಚರಿಸಿದ್ದು, ವಿಜಯೋತ್ಸವ ಮುಗಿಸಿ ವಾಪಸ್ಸಾಗುತ್ತಿದ್ದ ಇನೋಳಿ ನಿವಾಸಿಗಳಾದ ಹರೀಶ್(41) ಮತ್ತು ನಂದ ಕುಮಾರ್(24) ಎಂಬವರಿಗೆ ಅನ್ಯಕೋಮಿನ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿತ್ತು. ಹರೀಶ್ ಅವರು ಗಂಭೀರ ಗಾಯಗೊಂಡು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ನಂದ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಜಯೋತ್ಸವ ಬಳಿಕ ಹಿಂತಿರುಗುತ್ತಿದ್ದಾಗ ಬೋಳಿಯಾರ್ ಮಸೀದಿ ಎದುರು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನ ಕೂಗಿದ್ದರೆನ್ನಲಾಗಿದೆ. ಈ ವೇಳೆ, 15 ಬೈಕುಗಳಲ್ಲಿ ಮುಸ್ಲಿಂ ಯುವಕರು ಬಂದು ಗುಂಪು ಸೇರಿದ್ದಾರೆ. ಇನ್ನೋಳಿಯ ಹರೀಶ್, ನಂದ ಕುಮಾರ್ ಮತ್ತು ಕಿಶನ್ ಕುಮಾರ್ ಎಂಬವರು ವಿಜಯೋತ್ಸವ ಮುಗಿಸಿ ಮನೆಗೆ ಮರಳುವ ವೇಳೆ ಬೋಳಿಯಾರಿನ ಬಾರ್ ಒಂದರ ಮುಂಭಾಗದಲ್ಲಿ ತಂಡ ಬೆನ್ನಟ್ಟಿದ್ದು ಹರೀಶ್ ಮತ್ತು ನಂದನ್ ಮೇಲೆ ಹಲ್ಲೆಗೈದು ಚೂರಿಯಿಂದ ಇರಿದು ಪರಾರಿಯಾಗಿತ್ತು.
ಘಟನೆ ವಿಷಯ ತಿಳಿದು ರಾತ್ರಿಯೇ ಆಸ್ಪತ್ರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ನಂದನ್ ಮಲ್ಯ, ಪುತ್ತಿಲ ಪರಿವಾರದ ಅರುಣ್ ಪುತ್ತಿಲ, ಮುಖಂಡರಾದ ಸಂತೋಷ್ ಬೋಳಿಯಾರ್ ಸೇರಿದಂತೆ ಹಲವರು ಭೇಟಿ ನೀಡಿ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಜರಗಿಸುವಂತೆ ಪೊಲೀಸರಲ್ಲಿ ಆಗ್ರಹಿಸಿದ್ದರು. ನೂರಾರು ಬಿಜೆಪಿ ಕಾರ್ಯಕರ್ತರು ಕೊಣಾಜೆ ಠಾಣೆಗೆ ಮಧ್ಯರಾತ್ರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಾರಿನ ಸಿಸಿಟಿವಿಯಲ್ಲಿ ಹೊಡೆದಾಟ ದೃಶ್ಯ ಸೆರೆಯಾಗಿದ್ದು ಡಿವಿಆರ್ ಅನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಅದರಂತೆ, ಶಂಕಿತ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆನ್ನಲಾಗಿದೆ.
Stabbing in Mangalore at Boliyar, BJP leaders visit hospital, 4 taken into custody by police. Two BJP workers were stabbed near Boliyar in Konaje police station limits late night on Sunday after they were returning home after a victory procession to mark the oath taking of the new government at the Centre.
13-01-25 10:30 pm
HK News Desk
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
Minister Parameshwara, Yatnal: 'ನೀವು ಸಾಬರಿಗೆ...
11-01-25 10:53 pm
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
13-01-25 10:49 pm
HK News Desk
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
13-01-25 09:08 pm
Mangalore Correspondent
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
Historian Vikram Sampath, Lit Fest Mangalore...
12-01-25 11:03 pm
PLD bank election, MLA Ashok Rai, Puttur: ಪಿಎ...
12-01-25 10:06 pm
13-01-25 03:30 pm
Mangaluru Correspondent
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am