Mangalore crime, Robbery: 2022ರಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಬೀಗ ಮುರಿದು ಲ್ಯಾಪ್‌ಟಾಪ್ ಕಳ್ಳತನ ; ಎರಡು ವರ್ಷದ ಬಳಿಕ ಸಿಕ್ಕಿಬಿದ್ದ ಮಂಗಳೂರು ಮೂಲದ ಕಳ್ಳ , ಪೊಲೀಸರ ಶ್ರಮಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ 

15-06-24 02:04 pm       HK News Desk   ಕ್ರೈಂ

ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಟ್ಟಿಗೆಹಾರ, ಜೂ.15: ಕೊಟ್ಟಿಗೆಹಾರ ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಎರಡು ವರ್ಷದ ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಶರತ್ ಬಂಧಿತ ಆರೋಪಿಯಾಗಿದ್ದು ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನು.

ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿ ಪೊಲೀಸರಿಗೆ ಚಳ್ಳೇಹಣ್ಣು ತಿಳಿಸಿದ್ದ. ನಂತರ ಕಳಸದ ಹೆಮ್ಮಕ್ಕಿಯಲ್ಲಿ ತೋಟವೊಂದರಲ್ಲಿ ಕೆಲಸ ಮಾಡಿಕೊಂಡು ಇದ್ದ. ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಆದ್ರೆ ಇತ್ತೀಚಿಗೆ ಸಿಮ್ ಖರೀದಿ ಮಾಡಿರೋ ವಿಷಯ ಪೊಲೀಸರಿಗೆ ಗೊತ್ತಾಗಿದೆ, ಸಿಮ್ ಕಾರ್ಡ್ ಆಧರಿಸಿ ಲೊಕೇಶನ್ ಟ್ರೇಸ್ ಮಾಡಿದ ಪೊಲೀಸರು ಕಳ್ಳನ ಮನೆಗೆ ಡೈರೆಕ್ಟ್ ಎಂಟ್ರಿ ಕೊಟ್ಟಿದ್ದಾರೆ. ಲ್ಯಾಪ್‌ಟಾಪ್ ಕದ್ದು ಹಾಯಾಗಿದ್ದ ಕೆಡಿಗಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಪೊಲೀಸರ ಶ್ರಮಕ್ಕೆ ತರುವೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. 

ಕಾರ್ಯಾಚರಣೆಯಲ್ಲಿ ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಚ್.ಸಿ.ರಮೇಶ್ ಕುಮಾರ್,ಸಚಿನ್,ಮೆಹಬೂಬ್, ಮಾಲತೇಶ್, ಚಾಲಕ ಅಶೋಕ್ ಭಾಗವಹಿಸಿದ್ದರು. ಪೊಲೀಸರ ಸಾಧನೆಯನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.

Police arrest robber from Mangalore for stealing laptop from gram panchayat office in Chikmagalur. The arrested has been identified as Sharath a native of Dakshina Kannada.