ಬ್ರೇಕಿಂಗ್ ನ್ಯೂಸ್
22-06-24 10:56 pm Bengaluru Correspondent ಕ್ರೈಂ
ಹಾಸನ, ಜೂ 22: ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಬಂಧನ ಭೀತಿ ಎದುರಾಗಿದೆ.
ಶನಿವಾರ ಸಂಜೆ ಹೊಳೆನರಸೀಪುರ ಪೊಲೀಸರು ಗನ್ನಿಕಡದ ತೋಟದ ಮನೆಯಿಂದ ಸೂರಜ್ ರೇವಣ್ಣ ಅವರನ್ನು ನಗರದ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಸೂರಜ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ವಿಚಾರಣೆ ಪ್ರಾರಂಭಿಸಲಾಗಿದ್ದು, ಬಂಧನ ಸಾಧ್ಯತೆ ಇದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ದ ಸಲಿಂಗ ಕಾಮ, ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದಿದ್ದವು. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕರು ಮತ್ತು ಗೃಹ ಸಚಿವರಿಗೆ ದೂರು ಸಲ್ಲಿಕೆಯಾಗಿತ್ತು.
ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಹೊಳೆನರಸೀಪುರ ನಗರ ಠಾಣೆಗೆ ಪ್ರತಿ ದೂರು ನೀಡಿದ್ದರು. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿತ್ತು.
ಇವೆಲ್ಲದರ ನಡುವೆ, ಸೂರಜ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಸಂತ್ರಸ್ತ ಪೊಲೀಸ್ ಡಿಜಿ-ಐಜಿಪಿಗೆ ನೀಡಿದ್ದ ದೂರು ಹಾಸನ ಎಸ್‌ಪಿಗೆ ಇ-ಮೇಲ್ ಮುಖಾಂತರ ರವಾನೆಯಾಗಿತ್ತು.
ನಂತರ ಶನಿವಾರ ಸಂತ್ರಸ್ತ ನೀಡಿದ ದೂರಿನ ಪ್ರತಿಯನ್ನು ಹಾಸನ ಎಸ್‌ಪಿ ಹೊಳೆನರಸೀಪುರ ಠಾಣೆಗೆ ಕಳುಹಿಸಿದ್ದರು. ಇ-ಮೇಲ್ ದೂರಿನ ಅನ್ವಯ ಸಂತ್ರಸ್ತನಿಗೆ ನೊಟೀಸ್ ನೀಡಿ ಖುದ್ದು ಠಾಣೆಗೆ ಬಂದು ದೂರು ನೀಡುವಂತೆ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಸೂಚಿಸಿದ್ದರು. ನಂತರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮದ ಆರೋಪ ಮಾಡಿದ್ದ ಸಂತ್ರಸ್ತ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಸೂರಜ್ ಅವರನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಈಗಾಗಲೇ ಅವರ ತಂದೆ ಎಚ್‌ಡಿ ರೇವಣ್ಣ ಅವರು ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ, ಸದ್ಯ ಜಾಮೀನು ಪಡೆದು ಹೊರಗಿದ್ದಾರೆ. ಅತ್ತ ತಾಯಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದರ ನಡುವೆ ಡಾ. ಸೂರಜ್ ವಿರುದ್ಧ ಯುವಕನೊಬ್ಬ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ಕೊಟ್ಟಿದ್ದು, ಗೌಡರ ಕುಟುಂಬದ ವಿರುದ್ಧ ಒಂದಾದ ಮೇಲೊಂದು ಆರೋಪಗಳು ಕೇಳಿ ಬರುತ್ತಲೇ ಇವೆ.
A case has been filed against Janata Dal (Secular) MLC Suraj Revanna, the brother of sex crimes-accused former MP Prajwal Revanna, over alleged sexual assault. A man filed the case against Suraj at Holenarasipura police station in Hassan district on Saturday, alleging that he was sexually assaulted by him at his farmhouse on June 16.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm