ಬ್ರೇಕಿಂಗ್ ನ್ಯೂಸ್
24-06-24 11:33 am HK News Desk ಕ್ರೈಂ
ಶಿವಮೊಗ್ಗ, ಜೂನ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಎಂಬಾತನನ್ನು ಬಂಧಿಸಲಾಗಿದೆ.
ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದಾರೆ, ಅರುಣ್ ಕುಗ್ವೆ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೆ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆದರೆ ಕಳೆದೆರೆಡು ತಿಂಗಳ ಹಿಂದೆ ಅರುಣ್ ಪ್ರೀತಿಸಿದ ಯುವತಿಯನ್ನು ಬಿಟ್ಟು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನು ಅರಿತ ಮೋಸ ಹೋದ ಯುವತಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಮಧ್ಯೆ, ಇವರಿಬ್ಬರ ನಡುವೆ ರಾಜಿ ಪಂಚಾಯತಿ ನಡೆದಿತ್ತು ಎನ್ನಲಾಗಿದೆ. ಎರಡು ದಿನಗಳ ಹಿಂದೆ ನೊಂದ ಯುವತಿ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ದಾಖಲಿಸಿಕೊಂಡ ಪೊಲೀಸರು ಅರುಣ್ ಕುಗ್ವೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ನಿಜಾಂಶ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಆರೋಪಿ ಅರುಣ್ ಕುಗ್ವೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಅರುಣ್ ಕುಗ್ವೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಬಿಜೆಪಿ ಮುಖಂಡ ಅರುಣ್ ಕುಗ್ವೆ ಅವರಿಗೆ ಇದೇ ಜೂನ್ 28ಕ್ಕೆ ಮದುವೆ ಫಿಕ್ಸ್ ಆಗಿತ್ತು. ಈ ನಡುವೆ, ಯುವತಿ ನೀಡಿದ ದೂರಿನಂತೆ ಅರುಣ್ ಬಂಧನ ಆಗಿದ್ದು ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.
Shivamogga District BJP Yuva Morcha Secretary Arun Kugve has been arrested by the women's police station on the charge of sexually assaulting a young woman on the pretext of marrying her. Arun Kugve is a resident of Sagar in Karnataka's Shivamogga.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
13-01-25 10:49 pm
HK News Desk
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
14-01-25 02:27 pm
Mangalore Correspondent
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
Historian Vikram Sampath, Lit Fest Mangalore...
12-01-25 11:03 pm
14-01-25 04:47 pm
Mangalore Correspondent
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm