ಬ್ರೇಕಿಂಗ್ ನ್ಯೂಸ್
01-07-24 05:27 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 01: ರಿಲ್ಸ್ ಶೋಗಾಗಿ ಶೋಕಿ ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 ರೈಫಲ್ ಹಿಡಿದ ಗನ್ ಮ್ಯಾನ್‌ಗಳನ್ನ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ನಗರದಲ್ಲಿ ಶೋಕಿ ಮಾಡುತ್ತಿದ್ದ.
ಬೀದಿಬೀದಿಯಲ್ಲಿ ಈತನ ಗನ್ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.
ಹೀಗೆ ಶೋ ಮಾಡಲು ಹೋಗಿ ಜೈಲು ಸೇರಿರುವ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.
ಈತ ಬಾಡಿಗಾರ್ಡ್ಸ್ ಇಟ್ಕೊಂಡು, ಅವರ ಕೈಲಿ ಎಕೆ 47 ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಈತನನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.
Arun Kathare internet reels star arrested by bangalore police for posing with ak 47 guns and fake gold with bodyguards. Public has complained against him for moving around with guns and bodyguards. Police who arrested him booked him under arms act and has been sent to jail.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 11:03 pm
Mangalore Correspondent
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm