ಬ್ರೇಕಿಂಗ್ ನ್ಯೂಸ್
04-07-24 07:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಭಾರೀ ಕುತೂಹಲ ಮೂಡಿಸಿದ್ದ ಉಳಾಯಿಬೆಟ್ಟು ದರೋಡೆ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಕೇರಳ ಮೂಲದ ನಟೋರಿಯಸ್ ದರೋಡೆಕೋರರು ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಯಾವುದೇ ಸುಳಿವು ಕೊಡದೆ ಎಸ್ಕೇಪ್ ಆಗಿದ್ದ ಆರೋಪಿಗಳ ಪತ್ತೆಗಾಗಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಕಂಕನಾಡಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್, ಎಸಿಪಿ ಗೀತಾ ಮತ್ತು ಸಿಸಿಬಿ ತಂಡಗಳು ಪ್ರತ್ಯೇಕವಾಗಿ ತನಿಖೆ ನಡೆಸಿದ್ದವು. ಆರಂಭದಲ್ಲಿ ಬಂಟ್ವಾಳ ಮೂಲಕ ಕಾರು ತೆರಳಿರುವುದು ಪತ್ತೆಯಾಗಿತ್ತು. ಆನಂತರ ತನಿಖೆ ವೇಳೆ ತಲಪಾಡಿ ಮೂಲಕ ಆರೋಪಿಗಳು ಪರಾರಿಯಾಗಿದ್ದು ತಿಳಿದುಬಂದಿತ್ತು.
ನೀರುಮಾರ್ಗ ನಿವಾಸಿಗಳಾದ ವಸಂತ ಕುಮಾರ್ (42), ರಮೇಶ ಪೂಜಾರಿ(42), ರೇಮಂಡ್ ಡಿಸೋಜ47), ಪೈವಳಿಕೆ ಕುರುಡಪದವು ನಿವಾಸಿ ಬಾಲಕೃಷ್ಣ ಶೆಟ್ಟಿ(48), ತೃಶೂರು ಜಿಲ್ಲೆಯ ಜಾಕಿರ್ ಯಾನೆ ಶಾಕೀರ್ (56), ವಿನೋಜ್ (38), ಸಜೀಶ್ (32), ಸತೀಶ್ ಬಾಬು(44), ಶಿಜೋ ದೇವಸ್ಸಿ (38), ತಿರುವನಂತಪುರ ಜಿಲ್ಲೆಯ ಬಿಜು (41) ಬಂಧಿತರು.
ಮನೆ ಕೆಲಸದಾಳುವೇ ಸೂತ್ರಧಾರ !
ತನಿಖೆಯ ಸಂದರ್ಭದಲ್ಲಿ ಪದ್ಮನಾಭ ಕೋಟ್ಯಾನ್ ಜೊತೆಗೆ ಲಾರಿ ಚಾಲಕನಾಗಿದ್ದ ನೀರುಮಾರ್ಗ ನಿವಾಸಿ ವಸಂತ ಪೂಜಾರಿ ಬಗ್ಗೆ ಶಂಕೆ ಉಂಟಾಗಿತ್ತು. ಕೋಟ್ಯಾನ್ ಮನೆಯಲ್ಲಿ ಕೋಟಿಗಟ್ಟಲೆ ಹಣ ಇದೆಯೆಂದು ಸ್ಥಳೀಯ ರೇಮಂಡ್ ಡಿಸೋಜ ಎಂಬವರ ಜೊತೆಗೆ ಚರ್ಚೆ ಮಾಡಿದ್ದರು. ಇದರಂತೆ, ಕೋಟ್ಯಾಂತರ ಹಣವನ್ನು ಲೂಟಿ ಮಾಡಲು ರೇಮಂಡ್ ಸ್ಕೆಚ್ ಹಾಕಿದ್ದ. ಇದಕ್ಕಾಗಿ ಕಾಸರಗೋಡು ಜಿಲ್ಲೆಯ ಪೈವಳಿಕೆ ಬಾಲಕೃಷ್ಣ ಶೆಟ್ಟಿ ಮತ್ತು ಕೆಲವು ಕೇರಳ ಮೂಲದ ಆರೋಪಿಗಳನ್ನು ಸಂಪರ್ಕ ಮಾಡಿದ್ದ. ಮನೆ ಹೇಗಿದೆ ಎನ್ನುವುದರ ಬಗ್ಗೆ ಸಂಪೂರ್ಣ ಸ್ಕೆಚ್ ಅನ್ನು ವಸಂತ ನೀಡಿದ್ದಲ್ಲದೆ, ಮನೆಯಲ್ಲಿ ಯಾರೆಲ್ಲ ಇದ್ದಾರೆಂದು ಆರೋಪಿಗಳಿಗೆ ಮಾಹಿತಿ ನೀಡಿದ್ದ.
ಮನೆಯಲ್ಲಿ 100 ಕೋಟಿ ನಗದು ಇದೆಯೆಂದು ಕೇರಳ ತಂಡಕ್ಕೆ ರೇಮಂಡ್ ಡಿಸೋಜ ಮಾಹಿತಿ ನೀಡಿದ್ದ. ಇದಕ್ಕಾಗಿ ಆರೋಪಿಗಳು 15ರಷ್ಟು ಚೀಲಗಳನ್ನು ರೆಡಿ ಮಾಡಿಕೊಂಡು ಬಂದಿದ್ದರು. ಜಾಕೀರ್ ಹುಸೇನ್ ತನಿಖೆಯ ದಿಕ್ಕು ತಪ್ಪಿಸಲು ಹಿಂದಿ ಭಾಷೆ ಮಾತನಾಡುತ್ತ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ಮಾಡಿದ್ದ. ಇತರರು ಮನೆಯವರನ್ನು ಬೆದರಿಸಿ ಹಣ ಎಲ್ಲಿದೆ ಎಂದು ಹುಡುಕಾಟ ನಡೆಸಿದ್ದರು. ಆರೋಪಿಗಳಿಂದ 9 ಲಕ್ಷ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನಾಲ್ಕು ಜನರನ್ನು ನಿನ್ನೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಇವತ್ತು ಆರು ಮಂದಿಯನ್ನು ಅರೆಸ್ಟ್ ಮಾಡಿದ್ದೇವೆ ಎಂದು ಸುದ್ದಿಗೋಷ್ಟಿಯಲ್ಲಿ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
300 ಕೋಟಿ ಇದೆಯೆಂದು ಬಿಂಬಿಸಿದ್ದ ತಂಡ
ಕೊನೆ ಕೊನೆಗೆ ಕೇರಳ ತಂಡಕ್ಕೆ 300 ಕೋಟಿ ನಗದು ಇದೆಯೆಂದು ಮಾಹಿತಿ ಹೋಗಿತ್ತು. ಕೋಟ್ಯಾನ್ ಮಲಗುತ್ತಿದ್ದ ಬೆಡ್ ಅಡಿಭಾಗದಲ್ಲಿ ನಗದು ಹಣ ಇದೆಯೆಂದು ಶಂಕೆಯಲ್ಲಿ ಆರೋಪಿಗಳ ತಂಡ ಆರು ತಿಂಗಳಿನಿಂದ ಸ್ಕೆಚ್ ಹಾಕಿತ್ತು. ಭಾರೀ ಹಣ ಇದೆಯೆಂದು ದರೋಡೆ ಬಗ್ಗೆ ಸಾಕಷ್ಟು ಮುಂಜಾಗ್ರತೆ ವಹಿಸಿ ಸಂಚು ನಡೆಸಿತ್ತು. ಜೂನ್ 18ರಂದು ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಕೊನೆ ಕ್ಷಣದಲ್ಲಿ ಕೈಬಿಟ್ಟು ಬಳಿಕ ಎರಡು ದಿನ ಬಿಟ್ಟು 21ರಂದು ಸಂಜೆಯೇ ಮನೆ ಹೊಕ್ಕಿದ್ದರು. ದರೋಡೆ ಪ್ರಕರಣ ಮಂಗಳೂರು ಪೊಲೀಸರಿಗೆ ಭಾರೀ ಸವಾಲಾಗಿ ಪರುಣಮಿಸಿತ್ತು.
Mangalore Ulaibettu Dacoity case, 10 notorious criminals arrested by CCB police. Dacoity had taken place at the residence of Padmanabha Kotian, an entrepreneur and PWD contractor, in Ulaibettu Permanki, under the jurisdiction of the Mangaluru rural police station. The dacoits looted around Rs 9 lac in valuables, including Rs 1.5 lac in cash, after tying up Padmanabha Kotian's wife and son and stabbing the entrepreneur.
18-01-25 05:05 pm
Bangalore Correspondent
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
Sp Belagavi, Minister Laxmi Hebbalkar car acc...
15-01-25 09:17 pm
ಮುಡಾ ಪ್ರಕರಣ ; ಸಿಬಿಐ ತನಿಖೆ ಕೋರಿದ್ದ ಅರ್ಜಿ ಜ.27ಕ...
15-01-25 08:22 pm
Dolly Chaiwala, Mangalore; ಅಮೆರಿಕದ ಬಿಲ್ ಗೇಟ್ಸ...
15-01-25 06:37 pm
16-01-25 09:01 pm
HK News Desk
Actor Saif Ali Khan attack stabbed: ಬಾಲಿವುಡ್...
16-01-25 04:24 pm
Bonnie Blue: 12 ಗಂಟೆಯಲ್ಲಿ 1,000ಕ್ಕೂ ಅಧಿಕ ಪುರು...
15-01-25 10:51 pm
Mallikarjun Kharges, L N T chairman: ಕಾಂಗ್ರೆಸ...
15-01-25 10:06 pm
ಮಹಾ ಕುಂಭ ಮೇಳಕ್ಕೆ ಗೂಗಲ್ ಪುಷ್ಪ ವೃಷ್ಟಿ ! ಮೊಬೈಲ್...
14-01-25 07:18 pm
17-01-25 11:10 pm
Mangalore Correspondent
Mangalore court, Rape, Crime: ಇನ್ಸ್ಟಾಗ್ರಾಮ್ ನ...
17-01-25 10:58 pm
Ullal News, Mangalore: ಸೋಮೇಶ್ವರ ; ಬಾಡಿಗೆ ಮನೆಯ...
17-01-25 10:50 pm
Mangalore Koteker Bank Robbery, MP Brijesh Ch...
17-01-25 10:36 pm
CM Siddaramaiah, RGUHS Mangalore; ರಾಜೀವ ಗಾಂಧಿ...
17-01-25 07:42 pm
18-01-25 10:28 am
Mangalore Correspondent
Kotekar Bank Robbery, Latest Update, Mangalor...
17-01-25 07:58 pm
Kotekar Bank Robbery, Mangalore Crime; ಬೀದರ್...
17-01-25 03:02 pm
Bidar SBI Bank Robbery Update, Hyderabad Firi...
17-01-25 02:48 pm
Bidar SBI Bank Robbery; ಬೀದರ್; ATM ಹಣಹಾಕಲು ಬಂ...
16-01-25 03:10 pm