ಬ್ರೇಕಿಂಗ್ ನ್ಯೂಸ್
04-07-24 10:18 pm Udupi Correspondent ಕ್ರೈಂ
ಉಡುಪಿ, ಜುಲೈ.4: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಉತ್ತರ ಭಾರತ ಮೂಲದ ಗಿಟಿಕಾ ಬಸಿನ್ ಎಂಬ ಯುವತಿ ಜೂ.23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್‌ಆ್ಯಪ್‌ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿ ಕೊಡಲಾಗಿದ್ದ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ. ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್‌ಗೆ Linkdin idea 2024 ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್‌ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು. ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಗೆ “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂದು ಅಪರಿಚಿತರು ಆಮಿಷ ಒಡ್ಡಿದ್ದರು. ಅದರ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದರ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
WhatsApp online fraud, Udupi manipal student looses 5 lakhs. She was trapped with Job review and pre paid tasks and later lost Rs 5 lakhs from her account. A case has been registered at the cyber police station.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm