ಬ್ರೇಕಿಂಗ್ ನ್ಯೂಸ್
07-07-24 07:54 pm HK News Desk ಕ್ರೈಂ
ಶಿವಮೊಗ್ಗ, ಜುಲೈ.07: ಕಾಣೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಯುವತಿ ಈಗ ಶವವಾಗಿ ಪತ್ತೆಯಾಗಿದ್ದಾಳೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.
ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್ ಕಂಪ್ಲೇಟ್ ಕೊಟ್ಟಿದ್ದರು.
ಆಗುಂಬೆ ಪೊಲೀಸ್ ಠಾಣೆಯ ಪಿಎಸ್‌ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರಿಗೆ ಆಗುಂಬೆಯ ಹೊಂಡಾದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು.
ಬಳಿಕ ಆಕೆಯ ಫೋನ್ ಕಾಲ್ ಲಿಸ್ಟ್ ತೆಗೆದು ಮಿಸ್ಸಿಂಗ್ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.
ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.
ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಪೊಲೀಸರು ಆರೋಪಿ ಮಣಿಯನ್ನು ಶವ ಎಸೆದ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಶವವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಕಳಿಸಿದ್ದಾರೆ.
ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
A woman, who had gone missing for the last four days, was found dead near Agumbe Ghat in Tirthahalli taluk on Saturday. The police have arrested a person, a distant relative of the woman, in connection with the murder. Pooja, 24, of Hosamane in Naluru-Kulige panchayat in Tirthahalli taluk had gone missing four days ago. Her parents filed a complaint with the police. During the investigation, the police interrogated a few of her relatives and finally found that she was allegedly murdered by her distant relative, Manikantha. The police arrested the accused
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm