ಬ್ರೇಕಿಂಗ್ ನ್ಯೂಸ್
09-07-24 08:02 pm Mangalore Correspondent ಕ್ರೈಂ
ಮಂಗಳೂರು, ಜುಲೈ.9: ಉರ್ವಾದಲ್ಲಿ ವೃದ್ಧ ದಂಪತಿಯ ಮೇಲೆ ಹಲ್ಲೆಗೈದು ಚಿನ್ನಾಭರಣ ದರೋಡೆ ಮಾಡಿದ್ದ ಮಧ್ಯಪ್ರದೇಶ ಮೂಲದ ಚಡ್ಡಿ ಬನಿಯಾನ್ ಗ್ಯಾಂಗ್ ಸದಸ್ಯರನ್ನು ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಸಕಲೇಶಪುರದಲ್ಲಿ ಬಂಧಿಸಿದ್ದಾರೆ.
ಮಧ್ಯಪ್ರದೇಶ ಗುಣಾ ಜಿಲ್ಲೆಯ ರಗೋಗರ್ ತಾಲೂಕಿನ ವಿಶ್ವನಗರ ನಿವಾಸಿ ರಾಜು ಸಿಂಗ್ವಾನಿಯ (24), ಭೋಪಾಲ್ ಜಿಲ್ಲೆಯ ಗುಲಾಬ್ಗಂಜ್ ನಿವಾಸಿ ಮಯೂರ್ (30), ಮಾಧವ್ಗಡ್ ಅಶೋಕನಗರ ನಿವಾಸಿ ಬಾಲಿ (22), ಗುಣಾ ಜಿಲ್ಲೆಯ ಕೋತ್ವಾಲಿ ನಿವಾಸಿ ವಿಕ್ಕಿ (21) ಬಂಧಿತರು.
ಇಂದು ನಸುಕಿನ ಜಾವ ಸುಮಾರು 4 ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ಉರ್ವಾ ಬಳಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ಸ್ ತುಂಡರಿಸಿ ಒಳನುಗ್ಗಿದ್ದು ವೃದ್ಧ ದಂಪತಿಗೆ ಹಲ್ಲೆಗೈದು ಬೆದರಿಸಿ, ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಕಪಾಟಿನ ಲಾಕರ್ ಒಳಗೆ ಇರಿಸಿದ್ದ 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ. 3000 ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು. ಈ ಬಗ್ಗೆ ವಿಕ್ಟರ್ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೊನ್ಸಾ ನೀಡಿದ ದೂರಿನಂತೆ ಉರ್ವಾ ಠಾಣೆಯಲ್ಲಿ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ನಡೆದ ಬೆನ್ನಲ್ಲೇ ಪೊಲೀಸರು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಎಲ್ಲ ಠಾಣೆಯ ಪೊಲೀಸರಿಗೆ ಅಲರ್ಟ್ ಸೂಚನೆ ಹೋಗಿತ್ತು. ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆ ಮಾಡಿ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಶಂಕಿತ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡುಬಂದಿತ್ತು.
ಕೂಡಲೇ ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮಾಹಿತಿ ಪಡೆದಿದ್ದು ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದರು. ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ನಿರ್ವಾಹಕರನ್ನು ಸಂಪರ್ಕಿಸಿ ಅವರ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಗಿತ್ತು. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ದರೋಡೆ ಕೃತ್ಯದ ಬಗ್ಗೆ ಒಪ್ಪಿಕೊಂಡಿದ್ದಾರೆ. ಅವರ ಬಳಿಯಲ್ಲಿದ್ದ ಮಂಗಳೂರಿನಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಹಾಗೂ ಹಣವನ್ನು ವಶಪಡಿಸಿ ಉರ್ವಾ ಪೊಲೀಸರಿಗೆ ನೀಡಿರುತ್ತಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸುಳಿವೇ ಇಲ್ಲದ ಕೃತ್ಯದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಭಾರತೀ ಜಿ. ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ಕಾರ್ಯಾಚರಣೆ ನಡೆಸಿದ್ದಾರೆ. ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಎಸ್ಪಿ ಮಹಮ್ಮದ್ ಸುಜೀತಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಮ್ಮಯ್ಯ ಎಂ.ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಸಹಕರಿಸಿರುತ್ತಾರೆ.
Mangalore police arrest deadly Chaddi Baniyan gang with 24 hours with the help of ksrtc staff. The gang had entered house in urwa attacked the elderly couple and then looted gold and fled with their car, Mangalore police have done a commendable Job by nabbing the gang that had created fear among public.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm