ಬ್ರೇಕಿಂಗ್ ನ್ಯೂಸ್
12-07-24 10:08 pm Mangalore Correspondent ಕ್ರೈಂ
ಮಂಗಳೂರು, ಜುಲೈ.12: ನಗರದ ಕಪಿತಾನಿಯೋ ಬಳಿ ದಿನಸಿ ಅಂಗಡಿಯಿಂದ 10 ಲಕ್ಷ ರು. ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನಗದು ವಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉತ್ತರ ಪ್ರದೇಶ ಮೂಲದ ಮಹಮ್ಮದ್ ನಜೀರ್ ಹೌಸಿಲ್ ಖಾನ್(27) ಹಾಗೂ ಇಲಿಯಾಸ್ ಖಾನ್(22) ಬಂಧಿತ ಆರೋಪಿಗಳು. ಘಟನೆ ನಡೆದ 16 ಗಂಟೆಯಲ್ಲೇ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಕಂಕನಾಡಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜು.8 ರಂದು ಕಪಿತಾನಿಯೋ ಸಮೀಪವಿರುವ ಲೋಟಸ್ ಗ್ಯಾಲಕ್ಸಿ ಕಾಂಪ್ಲೆಕ್ಸ್‌ನ ಬಿಎಚ್ ಟ್ರೇಡರ್ಸ್ ಎಂಬ ದಿನಸಿ ಅಂಗಡಿಯ ಶೆಟರ್ ಒಡೆದು ಇಬ್ಬರು ಕಳ್ಳರು ಕ್ಯಾಶ್ ಕೌಂಟರಿನಲ್ಲಿದ್ದ ಸುಮಾರು 10.20 ಲಕ್ಷ ರು. ಮೊತ್ತವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಅಂಗಡಿ ಮಾಲೀಕ ಉಮ್ಮರ್ ಫಾರೂಕ್ ಕಂಕನಾಡಿ ನಗರ ಪೊಲೀಸರಿಗೆ ದೂರು ನೀಡಿದ್ದರು. ಕಂಕನಾಡಿ ನಗರ ಠಾಣಾ ನಿರೀಕ್ಷಕ ಟಿ. ಡಿ. ನಾಗರಾಜ್ ನೇತೃತ್ವದಲ್ಲಿ ತನಿಖಾ ತಂಡ ಪ್ರಕರಣದ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಆಟೋ ಚಾಲಕರು ನೀಡಿದ ಮಾಹಿತಿ ಪಂಪ್‌ವೆಲ್ ಸುತ್ತಮುತ್ತ ದೊರೆತ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ರಾತ್ರಿ ವೇಳೆ ಸಂಚರಿಸಿದ ಸಂಶಯಿತರ ಬಗ್ಗೆ ಆಟೋರಿಕ್ಷಾ ಚಾಲಕರನ್ನು ಪೊಲೀಸರು ವಿಚಾರಿಸಿದಾಗ ಕೃತ್ಯ ನಡೆದ ರಾತ್ರಿ ಇಬ್ಬರು ಹಿಂದಿ ಮಾತನಾಡುವ ಸಂಶಯಿತರನ್ನು ರೈಲ್ವೇ ನಿಲ್ದಾಣಕ್ಕೆ ಬಿಟ್ಟ ಬಗ್ಗೆ ಮಾಹಿತಿ ದೊರಕಿತ್ತು. ಅದರಂತೆ ರೈಲ್ವೆ ನಿಲ್ದಾಣದ ಸಿಸಿಟಿವಿ ಪರಿಶೀಲಿಸಿ ಉತ್ತರ ಭಾರತಕ್ಕೆ ತೆರಳಿದ ರೈಲುಗಳ ವೇಳಾಪಟ್ಟಿ ಪರಿಶೀಲಿಸಿ ಎರ್ನಾಕುಲಂ-ಪುಣೆ ಎಕ್ಸ್‌ಪ್ರೆಸ್‌ನಲ್ಲಿ ಅದೇ ದಿನ ರಾತ್ರಿ ಇಬ್ಬರು ಮಂಗಳೂರಿನಿಂದ ಪುಣೆಗೆ ಎರಡು ಟಿಕೆಟ್ ಬುಕ್ ಮಾಡಿ ಹೊರಟಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ರಾತ್ರಿ 8.30ರ ಸುಮಾರಿಗೆ ರೈಲು ಮಹಾರಾಷ್ಟ್ರದ ಸತಾರ ದಾಟಿ ಮುಂದೆ ಹೋಗುತ್ತಿದ್ದು ರಾತ್ರಿ 11.45 ರ ವೇಳೆಗೆ ಪುಣೆ ತಲುಪುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಮಂಗಳೂರಿನ ಆರ್‌ಪಿಎಫ್ ಪೊಲೀಸರ ಮೂಲಕ ಪುಣೆ ಆರ್‌ಪಿಎಫ್ ಪೊಲೀಸರನ್ನು ಸಂಪರ್ಕಿಸಿದ್ದರು. ಅಲ್ಲದೆ, ಇಬ್ಬರು ವ್ಯಕ್ತಿಗಳ ಚಹರೆ, ಧರಿಸಿದ ಬಟ್ಟೆಗಳ ಬಗ್ಗೆ ಮಾಹಿತಿ ರವಾನಿಸಿ ವಶಕ್ಕೆ ಪಡೆಯಲು ತಿಳಿಸಿದ್ದರು. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಆಯುಕ್ತರು ಪುಣೆಯ ಜಿಆರ್‌ಪಿ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ರೈಲ್ವೇ ಪೊಲೀಸರ ನೆರವಿನಲ್ಲಿ ಅರೆಸ್ಟ್ ಅದೇ ರಾತ್ರಿ 11.45ರ ವೇಳೆಗೆ ಪುಣೆಯ ಆರ್‌ಪಿಎಫ್ ಹಾಗೂ ಜಿಆರ್‌ಪಿ ಪೊಲೀಸರು ಇಬ್ಬರು ಸಂಶಯಿತರನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಅವರ ಬಳಿ ಬ್ಯಾಗ್ ಇರದೇ ಇದ್ದು ಕೃತ್ಯದ ಬಗ್ಗೆ ಹೇಳಿರಲಿಲ್ಲ. ಅವರನ್ನು ಅಲ್ಲಿಯೇ ಹಿಡಿದಿಟ್ಟುಕೊಳ್ಳುವಂತೆ ಮನವಿ ಮಾಡಿಕೊಂಡ ನಂತರ ಇನ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ನೇತೃತ್ವದ ಪಿಎಸ್‌ಐ ಶಿವಕುಮಾರ್, ಸಿಬ್ಬಂದಿಗಳಾದ ಜಯಾನಂದ, ರಾಜೇಸಾಬ್ ಮುಲ್ಲಾ, ಚೇತನ್, ಪ್ರವೀಣ್ ತಂಡ ಕೂಡಲೇ ಪುಣೆಗೆ ತೆರಳಿ ಬಿಆರ್‌ಪಿ ಪೊಲೀಸರ ವಶದಲ್ಲಿದ್ದ ಇಬ್ಬರನ್ನು ವಿಚಾರಿಸಿದಾಗ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ರೈಲ್ವೆ ಫ್ಲ್ಯಾಟ್ ಫಾರ್ಮ್‌ನ ಬೇರೊಂದು ಕಡೆ ಹಣದ ಬ್ಯಾಗ್‌ನ್ನು ಬಚ್ಚಿಟ್ಟಿರುವುದಾಗಿ ತಿಳಿಸಿದ್ದರು. ಈ ವೇಳೆ ಕಳವಾದ 1.13 ಲಕ್ಷ ರು. ನಗದನ್ನು ವಶಪಡಿಸಲಾಗಿದೆ. ನಂತರ ಪುಣೆ ನ್ಯಾಯಾಲಯದಲ್ಲಿ ಟ್ರಾನ್ಸಿಟ್ ವಾರೆಂಟ್ ಪಡೆದು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.
ಕೆಲಸ ಸಿಗದ್ದಕ್ಕೆ ಕಳ್ಳತನ ಬಂಧಿತ ಆರೋಪಿಗಳನ್ನು ವಿಚಾರಿಸಿದಾಗ ಇಬ್ಬರು ಉತ್ತರಪ್ರದೇಶ ರಾಜ್ಯದವರಾಗಿದ್ದು, ಈಗಾಗಲೇ ಹಲವು ಜನರು ಮಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದು, ಮಂಗಳೂರು ನಗರವು ಶ್ರೀಮಂತ ನಗರವಾಗಿದ್ದು, ಇಲ್ಲಿ ಅನೇಕ ಹೋಟೆಲ್ ಉದ್ಯಮ ಮತ್ತು ಹೆಚ್ಚಿನ ಕೈಗಾರಿಕೆಗಳು ಇರುವುದರಿಂದ ನಾವುಗಳು ಕೇಟರಿಂಗ್ ಕೆಲಸ ಅಥವಾ ಯಾವುದಾದರು ಕೆಲಸ ಮಾಡುವ ಸಲುವಾಗಿ ಬಂದಿದ್ದೆವು. ಕೆಲಸ ತಕ್ಷಣಕ್ಕೆ ಸಿಗದೇ ಇದ್ದುದರಿಂದ ಮತ್ತು ಅವರ ಬಳಿಯಿದ್ದ ಹಣ ಖರ್ಚಾಗಿದ್ದರಿಂದ ಯಾವುದಾದರೂ ಸಣ್ಣ ಪುಟ್ಟ ಕಳ್ಳತನ ಮಾಡಲು ನಿರ್ಧರಿಸಿದ್ದೆವು ಎಂದಿದ್ದಾರೆ.
ಜು.8ರಂದು ಮಧ್ಯಾಹ್ನ ಮಂಗಳೂರು ರೈಲು ನಿಲ್ದಾಣದಿಂದ ಪಂಪ್‌ವೆಲ್ ಕಡೆಗೆ ಬಂದು ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ನೋಡಿದ್ದಾರೆ. ಬಿಎಚ್ ಟ್ರೇಡರ್ಸ್ ಅಂಗಡಿಯನ್ನು ನೋಡಿ ಅಂಗಡಿಯಲ್ಲಿ ದೊಡ್ಡ ಮಟ್ಟದಲ್ಲಿ ವ್ಯಾಪಾರವಾಗುವುದನ್ನು ಸಂಜೆ ಗಮನಿಸಿದ್ದಾರೆ. ಪುನಹಃ ರೈಲು ನಿಲ್ದಾಣಕ್ಕೆ ತೆರಳಿ ನಂತರ ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡಲು ನಿರ್ಧರಿಸಿದ್ದಾರೆ. ಕಳ್ಳತನ ಮಾಡಿದಾಗ ತುಂಬ ಮೊತ್ತದ ಹಣ ದೊರೆತ ಕಾರಣ ಅಲ್ಲಿ ಯಾರ ಕೈಗೆ ಸಿಕ್ಕಬಾರದು ಎಂದು ನಿರ್ಧರಿಸಿ ಪುಣೆಗೆ ಪ್ರಯಾಣ ಬೆಳೆಸಿರುವುದಾಗಿ ತನಿಖೆ ವೇಳೆ ತಿಳಿಸಿದ್ದಾರೆ. ಇವರ ಪೂರ್ವ ಹಿನ್ನೆಲೆಯ ಬಗ್ಗೆ ಹೆಚ್ಚಿನ ತನಿಖೆಯ ನಡೆಸುವ ಸಲುವಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.
ಕಂಕನಾಡಿ ಪಿಎಸ್‌ಐ ಶಿವಕುಮಾರ್, ಪಿಎಸ್‌ಐ ಶಾಂತಪ್ಪ, ಎಎಸ್‌ಐ ವೆಂಕಟೇಶ್ ಕುಂಬ್ಳೆ, ಎಎಸ್‌ಐ ಅಶೋಕ, ಸಿಬ್ಬಂದಿಯವರಾದ ಜಯಾನಂದ, ಸಂದೀಪ್, ಪ್ರದೀಪ್, ಪ್ರಿತೇಶ್, ರಾಜೇಶ್, ರಾಜೇಸಾಬ್ ಮುಲ್ಲಾ, ಚೇತನ್, ಗಂಗಾಧರ, ರಾಘವೇಂದ್ರ, ಸಂತೋಷ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್, ಎಸಿಪಿ ಧನ್ಯಾ ಎಸ್. ನಾಯಕ್ ಇದ್ದರು.
Kankanady town Police inspector T D Nagraj and team arrested two persons within 8 hours of a grocery shop theft case reported at Pumpwell on the night of July 8
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am