ಬ್ರೇಕಿಂಗ್ ನ್ಯೂಸ್
14-07-24 04:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬುರ್ಖಾ ಧರಿಸಿ ಬಜ್ಪೆಯ ಫೈನಾನ್ಸ್ ಕಚೇರಿಗೆ ನುಗ್ಗಿದ್ದ ಮೂವರಿದ್ದ ತಂಡ ಮಹಿಳೆ ಮೇಲೆ ಆ್ಯಸಿಡ್ ಹಾಕಿ ನಗದು ದರೋಡೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕೆರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತರು.
ಮಂಗಳೂರು ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಫೈನಾನ್ಸ್ ಕಚೇರಿಗೆ ಜು.4ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ಕಚೇರಿ ಒಳಗಡೆ ಬಂದು ಆ್ಯಸಿಡ್ ಬಾಟಲಿ ತೋರಿಸಿ ಮಹಿಳಾ ಸಿಬಂದಿಯನ್ನು ಬೆದರಿಸಿದ್ದರು. ಈ ವೇಳೆ, ಮಹಿಳೆ ಕಿರುಚಾಡಿದ್ದು ಕೂಡಲೇ ಹೊರಗೆ ಸ್ಟಾರ್ಟ್ ನಲ್ಲೇ ನಿಲ್ಲಿಸಿದ್ದ ಇನ್ನೊಬ್ಬ ವ್ಯಕ್ತಿಯ ಸ್ಕೂಟರಿನಲ್ಲಿ ಮೂವರು ಪರಾರಿಯಾಗಿದ್ದರು. ಇವರು ಅಲ್ಲಿಂದ ತೆರಳುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಎರಡು ಹಾಗೂ ಮೂಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳು ಕಳ್ಳತನದಿಂದ ಗಳಿಸಿದ್ದ ಸುಮಾರು 15 ಲಕ್ಷ ರೂ. ಮೌಲ್ಯದ ಇನೋವಾ ಕಾರು, ಸ್ವಿಫ್ಟ್ ಕಾರು ಮತ್ತು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
Bajpe police have arrested three individuals and confiscated valuables worth Rs 15 lac from the accused who allegedly wore burqas, poured acid on a woman working at a finance company, and attempted to loot gold ornaments.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 08:14 pm
Mangaluru Staffer
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
24-01-26 08:53 pm
HK Staffer
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm