ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 08:14 pm
Mangaluru Staffer
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
24-01-26 08:53 pm
HK Staffer
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm