ಬ್ರೇಕಿಂಗ್ ನ್ಯೂಸ್
19-07-24 10:47 pm HK News Desk ಕ್ರೈಂ
ಹೈದರಾಬಾದ್, ಜುಲೈ 20: ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿ ಉದ್ರೇಕಗೊಂಡ ಮೂವರು ಬಾಲಕರು ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಜುಲೈ 7ರಂದು ದೇವಸ್ಥಾನವೊಂದರಲ್ಲಿ 12 ವರ್ಷದ ಇಬ್ಬರು ಮತ್ತು 13 ವರ್ಷದ ಒಬ್ಬ ಸೇರಿ ಮೂವರು ಬಾಲಕರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದರು. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದರು.
ಅತ್ಯಾಚಾರ ನಡೆಸಿದ ಆರೋಪಿಗಳನ್ನು ಜುಲೈ 10ರಂದು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಮೂವರೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಆರನೇ ತರಗತಿಯಲ್ಲಿ ಓದುತ್ತಿದ್ದು, ಒಬ್ಬ 7ನೇ ತರಗತಿ ವಿದ್ಯಾರ್ಥಿ. ಅತ್ಯಾಚಾರದ ಬಳಿಕ ಬಾಲಕಿ ಪೋಷಕರಿಗೆ ದೂರು ನೀಡಬಹುದು ಎಂಬ ಭಯದಿಂದ ಮೂವರೂ ಸೇರಿ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಆರೋಪಿಯೊಬ್ಬನ ತಂದೆ ಮತ್ತು ಚಿಕ್ಕಪ್ಪ ಸೇರಿ ಬಾಲಕಿಯ ಶವವನ್ನು ಕಾಲುವೆಗೆ ಎಸೆದಿದ್ದರು ಎಂದು ನಂದ್ಯಾಲ್ ಎಸ್ಪಿ ಅಧಿರಾಜ್ ಸಿಂಗ್ ರಾಣಾ ತಿಳಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬ ಕೂಡಲೇ ತನ್ನ ಸಂಬಂಧಿಕರಿಗೆ ಕರೆ ಮಾಡಿ ಆಗಿರುವ ಪ್ರಮಾದದ ಬಗ್ಗೆ ತಿಳಿಸಿದ್ದ. ಮಕ್ಕಳ ಮೇಲೆ ಕಾನೂನು ಕ್ರಮ ಜರುಗಿಸಬಹುದೆಂಬ ಭಯದಿಂದ ಆತನ ತಂದೆ ಮತ್ತು ಚಿಕ್ಕಪ್ಪ ಸ್ಥಳಕ್ಕೆ ಧಾವಿಸಿ ಬಾಲಕಿಯ ಶವವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಕಲ್ಲಿಗೆ ಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದಾರೆ. ಅಪ್ರಾಪ್ತರು ಮತ್ತು ಅಪರಾಧ ಕೃತ್ಯ ಮುಚ್ಚಿ ಹಾಕಲು ಯತ್ನಿಸಿದ ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ರಾಣಾ ತಿಳಿಸಿದ್ದಾರೆ.
ಉದ್ಯಾನವನ ಒಂದರ ಬಳಿ ಆಟವಾಡುತ್ತಿದ್ದ ಬಾಲಕಿಗೆ ಬಾಲಕರ ಪರಿಚಯವಿತ್ತು. ತಮ್ಮೊಂದಿಗೆ ಆಟವಾಡಲು ಆಕೆಯನ್ನು ಮನವೊಲಿಸಿ ಕರೆದೊಯ್ದಿದ್ದರು. ಆನಂತರ ಅವರು ಆಕೆಯ ಬಾಯಿಯನ್ನು ಬಿಗಿದಿಟ್ಟು ಅತ್ಯಾಚಾರ ಎಸಗಿದ್ದರು. ಆದರೆ ಶ್ವಾನ ಕೊಟ್ಟ ಸುಳಿವು ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಮೂರೇ ದಿನದಲ್ಲಿ ಬಂಧಿಸಿದ್ದರು.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ.
Three jailed school-going boys, who allegedly raped and murdered an eight-year-old girl in Andhra Pradesh earlier this month, had watched porn videos on their phones before committing the crime.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 08:14 pm
Mangaluru Staffer
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
24-01-26 08:53 pm
HK Staffer
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm