ಬ್ರೇಕಿಂಗ್ ನ್ಯೂಸ್
20-07-24 09:13 pm HK News Desk ಕ್ರೈಂ
ಗ್ವಾಲಿಯರ್, ಜುಲೈ 20: ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮನಕಲಕುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.
ಅತ್ಯಾಚಾರ ನಡೆಸಿದ ಆರೋಪಿಗಳು ಅಪ್ರಾಪ್ತ ಬಾಲಕಿಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಆಕೆಯ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಈ ಘಟನೆ ಸಂಬಂಧಿಸಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, 13 ವರ್ಷದ ಬಾಲಕಿ ಇನ್‌ಸ್ಟಾಗ್ರಾಮ್ ಮೂಲಕ ಮೂವರು ಆರೋಪಿಗಳಲ್ಲಿ ಒಬ್ಬನೊಂದಿಗೆ ಸ್ನೇಹ ಬೆಳೆಸಿದ್ದಳು. ಈ ಘಟನೆ ನಡೆದ ದಿನ ಆರೋಪಿ ಅವಳನ್ನು ಭೇಟಿಯಾಗಲು ಕರೆದಿದ್ದ. ಅಲ್ಲಿ ಅವನು ಇತರ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ಕಾಯುತ್ತಿದ್ದ. ಅಲ್ಲಿಗೆ ಬಾಲಕಿ ಬಂದ ತಕ್ಷಣ ಕಾರಿನಲ್ಲಿ ಕರೆದೊಯ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಲೇ ಒಬ್ಬೊಬ್ಬರಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಮತ್ತೊಬ್ಬ ಸ್ನೇಹಿತ ಕೃತ್ಯವನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಘಟನೆ ವೇಳೆ ಆರೋಪಿಗಳು ವಿಡಿಯೋ ಮಾಡಿ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿ ಮತ್ತೆ ಭೇಟಿಯಾಗುವಂತೆ ಕರೆದಿದ್ದಾರೆ. ಅದಕ್ಕೆ ಆಕೆ ನಿರಾಕರಿಸಿದಾಗ ಅವರು ಆ ವಿಡಿಯೋವನ್ನು ಆಕೆಯ ಕುಟುಂಬದ ಸದಸ್ಯರಿಗೆ ಕಳುಹಿಸಿದ್ದಾರೆ.
ಆಕೆಯನ್ನು ಕುಟುಂಬದವರು ಮೋಹನಾ ಪೊಲೀಸ್ ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಇತರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದ್ದು, 3ನೇ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಅಪರಾಧಕ್ಕೆ ಬಳಸಿದ ಮೊಬೈಲ್ ಫೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ನಿರಂಜನ್ ಶರ್ಮಾ ತಿಳಿಸಿದ್ದಾರೆ.
A Class 9 student was allegedly abducted and raped in a moving car in Madhya Pradesh's Gwalior district last month, police said. According to officials, the incident occurred last month on the Gwalior-Shivpuri National Highway under the jurisdiction of Mohna police station.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm