ಬ್ರೇಕಿಂಗ್ ನ್ಯೂಸ್
24-07-24 05:09 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.24: ಮಹಿಳಾ ಪಿ.ಜಿ ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ (24) ಕೊಲೆಯಾಗಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
''ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ'' ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ತಿಳಿಸಿದ್ದಾರೆ.
ಘಟನೆಯ ಕುರಿತು ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕೋರಮಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ? ಕೃತ್ಯಕ್ಕೆ ಕಾರಣವೇನು? ಎಂಬುದು ತನಿಖೆಯ ನಂತರ ತಿಳಿಯಲಿದೆ' ಎಂದು ರಮಣ್ ಗುಪ್ತಾ ಮಾಹಿತಿ ನೀಡಿದರು.
A 24-year-old private firm employee was stabbed to death at a paying guest accommodation at Koramangala in Bengaluru on July 23. The deceased, Kruthi Kumari, was a native of Bihar. She worked in a private firm. She was staying in a ladies PG in VGR Layout.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm