ಬ್ರೇಕಿಂಗ್ ನ್ಯೂಸ್
24-07-24 06:45 pm HK News Desk ಕ್ರೈಂ
ಶಿವಮೊಗ್ಗ, ಜುಲೈ.24: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಹಲ್ಲೆಗೈದು ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಯುವತಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಕೊಪ್ಪ ಪೊಲೀಸರು ಕೊಲೆ ಪ್ರಕರಣವನ್ನು ಬಯಲು ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಬಳಿ ಕೊಲೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಯುವತಿ ಸೌಮ್ಯ ಕೊಲೆಯಾದವಳು. ಸಾಗರ ಮೂಲದ ಯುವಕ ಸೃಜನ್ ಕೊಲೆ ಆರೋಪಿ. ಇವರು ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವಂತೆ ಯುವತಿ ಪೀಡಿಸುತ್ತಿದ್ದರೆ, ಜಾತಿ ಬೇರೆಯಾಗಿದ್ದರಿಂದ ಯುವಕನ ಮನೆಯವರು ನಿರಾಕರಿಸಿದ್ದರು. ಇಬ್ಬರ ನಡುವೆ ಜಗಳವಾಗಿ ಪ್ರಿಯಕರನ ಏಟಿಗೆ ಯುವತಿ ಕೊಲೆಯಾಗಿ ಹೋಗಿದ್ದಾಳೆ.
ತೀರ್ಥಹಳ್ಳಿಯ ಫೈನಾನ್ಸ್ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸೃಜನ್ ಕೊಪ್ಪ ಆಸುಪಾಸಿನಲ್ಲಿ ಹಣ ವಸೂಲಿಗೆ ಹೋಗುತ್ತಿದ್ದ. ಇದೇ ವೇಳೆ ಯುವತಿ ಸೌಮ್ಯಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಇಬ್ಬರ ನಡುವೆ ಪರಿಚಯವಾಗಿ ಪ್ರೀತಿಗೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿ ಯುವಕ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಆನಂತರ ತನ್ನನ್ನು ಮದುವೆ ಆಗುವಂತೆ ಯುವತಿ ಒತ್ತಾಯ ಮಾಡುತ್ತಿದ್ದಳು.
ಇಬ್ಬರದ್ದು ಬೇರೆ ಬೇರೆ ಸಮುದಾಯ ಆಗಿದ್ದರಿಂದ ಯುವಕನ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಜುಲೈ 2ರಂದು ತೀರ್ಥಹಳ್ಳಿಗೆ ಹೋಗುತ್ತೇನೆ ಅಂತ ಕೊಪ್ಪದಿಂದ ಯುವತಿ ಸಾಗರಕ್ಕೆ ಬಂದಿದ್ದಳು. ಅಲ್ಲದೆ, ನನ್ನನ್ನು ನಿನ್ನ ಮನೆಗೆ ಕರೆದುಕೊಂಡು ಹೋಗುವಂತೆ ಒತ್ತಡ ಹಾಕಿದ್ದಳು. ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಪ್ರಿಯಕರ ಹೇಳಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದ್ದು ಯುವತಿ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ. ಇದರಿಂದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಳು.
ಸೌಮ್ಯಾ ಸತ್ತಿದ್ದರಿಂದ ಭಯಗೊಂಡ ಯುವಕ, ಆಕೆಯ ಶವವನ್ನು ಗುಡ್ಡದಲ್ಲಿ ಹೂತಿಟ್ಟು ಮನೆಗೆ ತೆರಳಿದ್ದ. ಇತ್ತ ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ಯುವತಿ ಪೋಷಕರು ದೂರು ನೀಡಿದ್ದರು. ಯುವಕನನ್ನು ಹುಡುಕಿ ಕೊಪ್ಪ ಪೊಲೀಸರು ಸಾಗರಕ್ಕೆ ಬಂದಿದ್ದರು. ಆರೋಪಿಯನ್ನು ಶಂಕೆಯಿಂದ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಲೇ ಪೊಲೀಸರ ಎದುರು ಕೊಂದು ಹೂತಿಟ್ಟ ರಹಸ್ಯವನ್ನ ಬಿಚ್ಚಿಟ್ಟಿದ್ದಾನೆ.
In a shocking incident, a man in Shivamogga allegedly attacked his girlfriend and killed her for allegedly harassing her to marry her.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm