ಬ್ರೇಕಿಂಗ್ ನ್ಯೂಸ್
30-07-24 11:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 30: ಒಂದು ವರ್ಷದ ಹಿಂದೆ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲಾಗಿದ್ದ ಮುಂಬೈ ಮೂಲದ ವ್ಯಕ್ತಿಯೊಬ್ಬ ವಿಶೇಷ ಚೇತನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ನಿರ್ದೋಷಿಗಳೆಂದು ಮಂಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
2023ರ ಆಗಸ್ಟ್ 16ರಂದು ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಪೂರ್ತಿಗೊಳಿಸಿ ಆರೋಪಿಗಳನ್ನು ನಿರಪರಾಧಿಗಳು ಎಂದು ಘೋಷಿಸಿ ಬಿಡುಗಡೆ ಮಾಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾದ ಮುಂಬೈನಲ್ಲಿ ನೆಲೆಸಿರುವ ಅಬ್ದುಲ್ ಹಲೀಂ(37) ಹಾಗೂ ಆತನಿಗೆ ಸಹಕಾರ ನೀಡಿದ್ದ ಕುಲಶೇಖರ ನಿವಾಸಿ ಶಮೀನಾ ಬಾನು(22) ಎಂಬವರ ವಿರುದ್ಧ ದೂರು ದಾಖಲಾಗಿತ್ತು.
ಮನ್ಸೂರ್ ಅಹಮದ್ ಬಾಬಾ ಶೇಖ್ ಮತ್ತು ಆರೋಪಿ ಅಬ್ದುಲ್ ಹಲೀಂ ಸ್ನೇಹಿತರಾಗಿದ್ದು, 2023ರ ಆಗಸ್ಟ್ 10ರಂದು ಕಾಸರಗೋಡಿನಿಂದ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ, ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರೂ ಆಸ್ಪತ್ರೆಯ ಒಂದೇ ಕೋಣೆಯಲ್ಲಿದ್ದರು. ಈ ಸಂದರ್ಭದಲ್ಲಿ ಮನ್ಸೂರ್ ಶೇಖ್ ಪತ್ನಿ ಶಮೀನಾ ಬಾನು ಎಂಬಾಕೆಯೊಂದಿಗೆ ವಿಶೇಷ ಚೇತನ ಮಗಳನ್ನು ಆಕೆಯ ತಾಯಿ ಬಿಟ್ಟು ಹೋಗಿದ್ದಳು.
ಈ ವೇಳೆ, ಶಮೀನಾ ಬಾನು ನೆರವಿನಲ್ಲಿ ಮುಂಬೈ ಮೂಲದ ಅಬ್ದುಲ್ ಹಲೀಂ ವಿಕಲಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಆರೋಪಿಗಳನ್ನು ಖುಲಾಸೆ ಮಾಡಿದೆ. 1ನೇ ಆರೋಪಿ ಪರವಾಗಿ ಮಂಗಳೂರಿನ ವಕೀಲರುಗಳಾದ ಜಗದೀಶ ಕೆ.ಆರ್, ಪ್ರಸಾದ್, ಹೇಮಂತ್, ಪ್ರಜ್ಞಾ ಹಾಗೂ 2ನೇ ಆರೋಪಿ ಪರವಾಗಿ ವಿವೇಕ್ ಮುಲ್ಕಿ, ಕೃಷ್ಣ ಕಾರಂತ್, ಚೇತನಾ ಕೆ, ಅಲೇಖ್ಯ ಕೆ. ಇವರು ವಕಾಲತ್ತು ನಡೆಸಿದ್ದರು.
Rape case in Indiana hospital in Mangalore, accused acquitted. 2023 mentally challenged girl had accused of rape by the accused when she was admitted in the hospital.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm