ಬ್ರೇಕಿಂಗ್ ನ್ಯೂಸ್
05-08-24 11:10 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.5: ಪಾಂಡೇಶ್ವರದ ಫೋರಮ್ ಮಾಲ್ ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ಯುವತಿಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪುತ್ತೂರು ಮೂಲದ ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ಪುತ್ತೂರು ನೆಹರು ನಗರದ ವಿನಯ(33), ಮಹೇಶ್(27), ಪಡ್ನೂರು ಗ್ರಾಮದ ಪ್ರೀತೇಶ್ (34), ಅದೇ ಪರಿಸರದ ನಿವಾಸಿ ನಿತೇಶ್(33) ಬಂಧಿತರು. ಇವರು ಪರಸ್ಪರ ಸಂಬಂಧಿಕರಾಗಿದ್ದು, ಶನಿವಾರ ರಾತ್ರಿ ಶೆರ್ಲಾಕ್ ಪಬ್ ಗೆ ಆಗಮಿಸಿದ್ದರು. ರಾತ್ರಿ ಹಿಂದೆ ತೆರಳುತ್ತಿದ್ದಾಗ 22 ವರ್ಷದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಎದೆಯ ಭಾಗಕ್ಕೆ ಕೈಹಾಕಿದ್ದರು ಎನ್ನಲಾಗಿದೆ. ಈ ವೇಳೆ, ತನಗೆ ಮತ್ತು ತನ್ನ ಗೆಳತಿಗೆ ಬೀಯರ್ ಬಾಟಲಿಯಲ್ಲಿ ಹಲ್ಲೆ ಮಾಡುವುದಕ್ಕೂ ಯುವಕರು ಮುಂದಾಗಿದ್ದಾರೆ ಎಂದು 22 ವರ್ಷದ ಯುವತಿ ದೂರು ನೀಡಿದ್ದರು.
ಆಗಸ್ಟ್ 3ರ ಶನಿವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸೆಕ್ಷನ್ 74, 79. 352 ಪ್ರಕಾರ ಕೇಸು ದಾಖಲಾಗಿದೆ.
Mangalore Forum mall Sherlock pub girl sexual harassment, four youths from Puttur arrested.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm