ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm