ಬ್ರೇಕಿಂಗ್ ನ್ಯೂಸ್
13-08-24 02:15 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 13: ತನ್ನ ಮೆಸೇಜಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಕಾಲೇಜು ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು ಆರೋಪಿ ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಈ ಹಿಂದೆ ಇದೇ ಕಾಲೇಜಿನಲ್ಲಿ ಓದುತ್ತಿದ್ದು ಆನಂತರ ಕಾಲೇಜು ಬಿಟ್ಟು ಊರಿಗೆ ಹೋಗಿದ್ದ. ತುಮಕೂರು ಮೂಲದ ಆತನಿಗೆ ಪರಿಚಯದ ಮತ್ತು ಆಳ್ವಾಸ್ ನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ತರಗತಿ ಒಳಗಡೆ ಬಂದು ಕತ್ತರಿಯಿಂದ ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ. ಕೂಡಲೇ ಇತರ ವಿದ್ಯಾರ್ಥಿಗಳು ಆತನನ್ನು ಹಿಡಿದಿದ್ದು ಮೂಡುಬಿದ್ರೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಾಹಿತಿ ಪ್ರಕಾರ, ತನ್ನ ಮೆಸೇಜ್ ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡಿದ್ದ ಯುವಕ ತುಮಕೂರಿನಿಂದ ಮೂಡಬಿದಿರೆಗೆ ಬಂದಿದ್ದು ಯುವತಿಯ ಭೇಟಿಗೆ ಯತ್ನಿಸಿದ್ದಾನೆ. ಬಳಿಕ ಭೇಟಿಗೆ ಸಿಕ್ಕಿಲ್ಲ ಎಂಬ ಕೋಪದಲ್ಲಿ ಆಕೆಯ ತರಗತಿಗೆ ತೆರಳಿ ಕತ್ತರಿಯಿಂದ ಇರಿಯಲು ಯತ್ನಿಸಿದ್ದಾನೆ.
ಘಟನೆಯಲ್ಲಿ ಯುವತಿ ಮುಖ ಮತ್ತು ಕುತ್ತಿಗೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು ಮೂಡುಬಿದ್ರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
A first-year BCA student sustained injuries after being attacked by a youth with scissors inside a classroom. According to Moodbidri police, the accused Manjunath, was upset because the girl had been ignoring his calls for the past 15 days. On Monday, he allegedly attacked her with scissors in a private college classroom.
15-01-25 12:19 pm
HK News Desk
Hassan Accident, Mangalore: ಕ್ಯಾಂಟಿನ್ಗೆ ನುಗ್...
14-01-25 03:36 pm
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
15-01-25 12:09 pm
Mangaluru Correspondent
Mangalore News, Savayava Sante: ಫೆಬ್ರವರಿ ತಿಂಗ...
14-01-25 08:36 pm
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm