ಬ್ರೇಕಿಂಗ್ ನ್ಯೂಸ್
18-08-24 02:07 pm Bangalore Correspondent ಕ್ರೈಂ
ಬೆಂಗಳೂರು, ಆ.18: ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ವೇಳೆಯೇ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ನೀಚ ಕೃತ್ಯ ನಡೆದಿದೆ. ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಯುವತಿಯ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಿ ಎಸ್ಕೇಪ್ ಆಗಿದ್ದು, ಘಟನೆಯಿಂದ ಅಘಾತಕ್ಕೆ ಒಳಗಾಗಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರಿನ ಕೋರಮಂಗಲದಲ್ಲಿ ಸ್ನೇಹಿತರ ಜೊತೆ ಯುವತಿ ಗೆಟ್ ಟುಗೆದರ್ ಪಾರ್ಟಿಯಲ್ಲಿ ಭಾಗಿಯಾಗಿದ್ದಳು. ರಾತ್ರಿ ಸಮಯದಲ್ಲಿ ಪಾರ್ಟಿ ಮುಗಿಸಿ ಸ್ನೇಹಿತರೊಂದಿಗೆ ಕಾರಿನಲ್ಲಿ ಮನೆಗೆ ಹೊರಟಿದ್ದಳು. ಆದರೆ ರಾತ್ರಿ 1:30ಕ್ಕೆ ಮನೆಗೆ ಹೊರಟಿದ್ದ ವೇಳೆ ಆಕೆ ಸ್ನೇಹಿತರೊಂದಿಗೆ ಬರುತ್ತಿದ್ದ ಕಾರಿಗೆ ಆಟೋ ಟಚ್ ಆಗಿದ್ದು, ಸ್ಥಳದಲ್ಲಿ ಸ್ನೇಹಿತರು ಹಾಗೂ ಆಟೋ ಚಾಲಕನ ನಡುವೆ ಗಲಾಟೆಯಾಗಿದೆ.
ಈ ವೇಳೆ ಆತಂಕಗೊಂಡ ಯುವತಿ ಸ್ಥಳದಿಂದ ಅನಾಮಿಕನೋರ್ವನ ಬೈಕ್ ನಲ್ಲಿ ಡ್ರಾಪ್ ಪಡೆದುಕೊಂಡಿದ್ದಾಳೆ. ಇದೇ ಸಮಯವನ್ನು ಬಳಸಿಕೊಂಡಿದ್ದ ಕಾಮುಕ ಆಕೆಯನ್ನು ಬೈಕ್ನಲ್ಲಿ ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಈ ವೇಳೆ ಯುವತಿ ತನ್ನ ಮೊಬೈಲ್ ನಲ್ಲಿ ಎಮರ್ಜೆನ್ಸಿ ನಂಬರ್‌ಗಳಾಗಿ ತಂದೆ, ಸ್ನೇಹಿತೆ ನಂಬರ್ ಸೇವ್ ಮಾಡಿಕೊಂಡಿದ್ದಾಳೆ. ಮೊಬೈಲ್ ಸ್ವಿಚ್ ಆದಾಗ ಲೋಕೇಷನ್ ಸಮೇತ ಕರೆ ಹೋಗಿದೆ. ಕೂಡಲೇ ಯುವತಿ ತಂದೆ, ಸ್ನೇಹಿತರು ಸ್ಥಳಕ್ಕೆ ಬಂದಾಗ ಅರೆನಗ್ನವಾಗಿ ಶೋಚನೀಯ ಸ್ಥಿತಿಯಲ್ಲಿ ಸಂತ್ರಸ್ತೆ ಪತ್ತೆಯಾಗಿದ್ದಾಳೆ. ಸ್ಥಳದಲ್ಲಿ ಕಾರಿನ ಟಾರ್ಪಲ್ ಅನ್ನು ಯುವತಿಗೆ ಸುತ್ತಿ ಆಕೆಯನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಸಂತ್ರಸ್ತೆ ಯುವತಿಗೆ ಸದ್ಯ ಮೆಡಿಕಲ್ ಟೆಸ್ಟ್ ನಡೆಸಲಾಗಿದ್ದು, ಆರೋಪಿ ಪತ್ತೆಗೆ 5 ವಿಶೇಷ ತಂಡಗಳನ್ನು ಪೊಲೀಸರು ರಚನೆ ಮಾಡಿದ್ದಾರೆ.
HSR ಲೇಔಟ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೋರಮಂಗಲದ ಪಬ್‌ನಲ್ಲಿ ನಡೆದ ಪಾರ್ಟಿಯಲ್ಲಿ ಯುವತಿ ಪಾಲ್ಗೊಂಡಿದ್ದಳಂತೆ. ಇನ್ನು ಕಾರು-ಆಟೋ ನಡುವೆ ಗಲಾಟೆ ನಡೆದ ಸಂದರ್ಭದಲ್ಲಿ ಹೊಯ್ಸಳ ಪೊಲೀಸರು ಬಂದು ಗಲಾಟೆ ನಿಲ್ಲಿಸಿದ್ದರಂತೆ. ಇನ್ನು, ಬೇರೆ ರಾಜ್ಯದ ಯುವತಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಡಿಗ್ರಿ ಓದುತ್ತಿದ್ದಳು ಎಂಬ ಮಾಹಿತಿ ಲಭ್ಯವಾಗಿದ್ದು, ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಯುವತಿಗೆ ಮೆಡಿಕಲ್ ಟೆಸ್ಟ್ ಆಗಿದೆ. ಆರೋಪಿಯ ಸುಳಿವು ಸಿಕ್ಕಿದ್ದು, ಆತನಿಗಾಗಿ ಶೋಧ ಮುಂದುವರಿದಿದೆ.
ಘಟನೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪೂರ್ವ ವಲಯ ಹೆಚ್ಚುವರಿ ಪೊಲೀಸ್ ಆಯುಕ್ತ ರಮನ್ ಗುಪ್ತ, ಒರ್ವ ವ್ಯಕ್ತಿ ಕ್ರಿಮಿನಲ್ ಅಸಲ್ಟ್ ಮಾಡಿ, ರೇಪ್ ಮಾಡುವ ಯತ್ನ ನಡೆದಿದೆ. ಆಕೆ ಬೈಕ್ ನಲ್ಲಿ ಡ್ರಾಪ್ ತೆಗೆದುಕೊಂಡು ಬರುವಾಗ ಘಟನೆ ನಡೆದಿದೆ. ಟು ವೀಲರ್ ನಲ್ಲಿ ಲಿಫ್ಟ್ ತೆಗೆದುಕೊಂಡಿದ್ದಾರೆ. ಅಪರಿಚಿತ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆಕೆ ಕೋರಮಂಗಲದಿಂದ ಗೆಟ್ ಟು ಗೆದರ್ ಪಾರ್ಟಿಗೆ ಹೋಗಿದ್ದರು ಎನ್ನಲಾಗಿದೆ. ಅಲ್ಲಿಂದ ಬರುವಾಗ ಹೀಗೆ ಆಗಿದೆ, ಆಕೆ ಹೊರ ರಾಜ್ಯದ ಯುವತಿ. ಇಲ್ಲಿ ವಿದ್ಯಾಭ್ಯಾಸಕ್ಕೆ ಅಂತಾ ಬೆಂಗಳೂರಿಗೆ ಬಂದಿದ್ದಳು, ಟು ವೀಲರ್ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಇಂದು ಬೆಳಗ್ಗೆ ದೂರು ದಾಖಲಾಗಿದೆ, ಆಕೆಯ ಆರೋಗ್ಯ ಸುಧಾರಿಸಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 64 ಅಡಿಯಲ್ಲಿ ಕೇಸ್ ದಾಖಲಾಗಿದೆ ಎಂದು ವಿವರಿಸಿದ್ದಾರೆ.
An unidentified person allegedly attempted to rape a woman in southeastern Bengaluru, police officers said on Sunday.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm