ಬ್ರೇಕಿಂಗ್ ನ್ಯೂಸ್
19-08-24 12:12 pm Bangalore Correspondent ಕ್ರೈಂ
ಬೆಂಗಳೂರು, ಆ.19: ಲಿಫ್ಟ್ ಪಡೆದಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಮುಕೇಶ್ವರನ್ ಎಂದು ಗುರುತಿಸಲಾಗಿದೆ.
ಆರೋಪಿಯು ನಗರದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯದ ಬಳಿಕ ಆಡುಗೋಡಿಯ ಚಂದ್ರಪ್ಪ ನಗರದಲ್ಲಿರುವ ತನ್ನ ಮನೆಯಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಶನಿವಾರ ರಾತ್ರಿ ತನ್ನ ಸ್ನೇಹಿತರೊಂದಿಗೆ ಕೋರಮಂಗಲದ ಪಬ್ಗೆ ಪಾರ್ಟಿಗೆ ಬಂದಿದ್ದ ಯುವತಿ, ಮನೆಗೆ ತೆರಳುವಾಗ ಆರೋಪಿಯ ಬಳಿ ಲಿಫ್ಟ್ ಕೇಳಿದ್ದಳು. ಲಿಫ್ಟ್ ಕೊಡುವ ನೆಪದಲ್ಲಿ ಆಕೆಯನ್ನು ಬೊಮ್ಮನಹಳ್ಳಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಆರೋಪಿ, ಯುವತಿಯ ಬಟ್ಟೆ ಹರಿದು ದುಷ್ಕೃತ್ಯಕ್ಕೆ ಯತ್ನಿಸಿದ್ದ. ಈ ವೇಳೆ ಯುವತಿಯೂ ಸಹ ಪ್ರತಿರೋಧವೊಡ್ಡಿದ್ದು, ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಳು. ಇದೇ ವೇಳೆ ಎಸ್ಓಎಸ್ ಅಲರ್ಟ್ ಆಧರಿಸಿ ಯುವತಿಯ ಸ್ನೇಹಿತರು ಸ್ಥಳಕ್ಕೆ ಬರುತ್ತಿದ್ದಂತೆ, ಆರೋಪಿ ಓಡಿ ಹೋಗಿದ್ದ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳವನ್ನು ತಲುಪಿದಾಗ, ಆಕೆಯ ಸ್ನೇಹಿತನು ಮುಖದ ಮೇಲೆ ಗಾಯದ ಗುರುತುಗಳಿದ್ದ ಶರ್ಟ್ ಧರಿಸದ ವ್ಯಕ್ತಿ ಹೋಗುತ್ತಿರುವುದನ್ನು ನೋಡಿದ್ದಾನೆ. ಆತನನ್ನು ಹಿಡಿದುಕೊಳ್ಳಲು ಯತ್ನಿಸಿದಾಗ ಆರೋಪಿ ಪರಾರಿಯಾಗಿದ್ದಾನೆ. ಸ್ವಲ್ಪ ಸಮಯದ ನಂತರ, ಇನ್ನೊಬ್ಬ ಸ್ನೇಹಿತ ಬಂದು ನೆಲದ ಮೇಲೆ ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿದ್ದ ಸಂತ್ರಸ್ತೆಯನ್ನು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಾಖಲಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಸಂತ್ರಸ್ತೆಯ ಸ್ನೇಹಿತ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಭಾನುವಾರ ಬೆಳಗ್ಗೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಭಾನುವಾರ ನಸುಕಿನ 1 ರಿಂದ 1.30 ರ ನಡುವೆ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಪೂರ್ವ), ರಮಣ್ ಗುಪ್ತಾ ತಿಳಿಸಿದ್ದಾರೆ. ಸೆಕ್ಷನ್ 64 (ಅತ್ಯಾಚಾರಕ್ಕೆ ಶಿಕ್ಷೆ) ಅಡಿಯಲ್ಲಿ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore rape case, accused dance choreographer arrested by police. The arrested has been identified as Mukeshwaran. A 21-year-old final-year undergraduate student was allegedly raped by unidentified assailant in Bengaluru's HSR Layout during the early hours of Sunday, August 18.
15-01-25 12:19 pm
HK News Desk
Hassan Accident, Mangalore: ಕ್ಯಾಂಟಿನ್ಗೆ ನುಗ್...
14-01-25 03:36 pm
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
15-01-25 12:09 pm
Mangaluru Correspondent
Mangalore News, Savayava Sante: ಫೆಬ್ರವರಿ ತಿಂಗ...
14-01-25 08:36 pm
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm