ಬ್ರೇಕಿಂಗ್ ನ್ಯೂಸ್
19-08-24 11:01 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 19: ಯೂಟ್ಯೂಬ್ ನೋಡಿ ಖೋಟಾ ನೋಟು ಪ್ರಿಂಟ್ ಮಾಡುವುದನ್ನು ಕಲಿತು 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಅದನ್ನು ಮಂಗಳೂರು ನಗರದಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2.13 ಲಕ್ಷ ಮೌಲ್ಯದ 427 ಖೋಟಾ ನೋಟುಗಳನ್ನು ವಶಪಡಿಸಿದ್ದಾರೆ.
ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಕೊಳತ್ತೂರಿನ ವಿ.ಪ್ರಿಯೇಶ್ (38), ಕಾಸರಗೋಡು ಜಿಲ್ಲೆಯ ಮಲ್ಲ ಗ್ರಾಮದ ಮುಳಿಯಾರಿನ ವಿನೋದ್ ಕುಮಾರ್ ಕೆ. (33), ಪೆರಿಯಾದ ಕುನಿಯಾ ವಡಂಕುರದ ಅಬ್ದುಲ್ ಖಾದರ್ ಎಸ್.ಎ (58) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಬೆಳಿಯೂರು ಕಟ್ಟೆಯ ಆಯೂಬ್ ಖಾನ್ (51) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 2.13 ಲಕ್ಷ ಮೌಲ್ಯದ 500 ಮುಖಬೆಲೆಯ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ. ಇವರು ಕಾಸರಗೋಡಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ತಂದು ಮಂಗಳೂರು ನಗರದ ಕ್ಲಾಕ್ ಟವರ್ ವೃತ್ತದ ಬಳಿಯ ಲಾಡ್ಜ್ ಒಂದರಲ್ಲಿದ್ದು ಚಲಾವಣೆಗೆ ಯತ್ನಿಸುತ್ತಿದ್ದರು. ಎಷ್ಟು ಮೊತ್ತದ ನಕಲಿ ನೋಟು ಚಲಾವಣೆ ಆಗಿದೆ ಮತ್ತು ಎಷ್ಟು ಸಮಯದಿಂದ ಮೋಸದ ಕೃತ್ಯ ನಡೆಯುತ್ತಿದೆ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ.
ಪ್ರಿಯೇಶ್ ಕಾಸರಗೋಡು ಜಿಲ್ಲೆಯ ಚೆರ್ಕಳದಲ್ಲಿ ಮುದ್ರಣಾಲಯವನ್ನು ಹೊಂದಿದ್ದು, ಅಲ್ಲಿ ಖೋಟಾ ನೋಟುಗಳನ್ನು ಮುದ್ರಿಸುತ್ತಿದ್ದ. ಅದಕ್ಕೆ ಬೇಕಾದ ಕಚ್ಚಾ ಸಾಮಾಗ್ರಿಗಳನ್ನು ಕೇರಳದ ಕೋಯಿಕ್ಕೋಡ್ ಮತ್ತು ದೆಹಲಿಯಿಂದ ಖರೀದಿಸಿ ತರುತ್ತಿದ್ದ. ಸಾಲದ ಸುಳಿಗೆ ಸಿಲುಕಿದ್ದ ಆತ ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸಿದ್ದ. ಸುಲಭದಲ್ಲಿ ಹಣ ಸಂಪಾದಿಸುವ ಉದ್ದೇಶದಿಂದ ನಾಲ್ಕು ತಿಂಗಳಿನಿಂದ ಈ ಕೃತ್ಯದಲ್ಲಿ ತೊಡಗಿದ್ದ. ಆತನಿಗೆ ಮಲ್ಲ ನಿವಾಸಿ ವಿನೋದ್ ಪರಿಚಯವಿತ್ತು. ವಿನೋದ್ ಮೂಲಕ ಅಬ್ದುಲ್ ಖಾದರ್ ಹಾಗೂ ಆನಂತರ ಆಯೂಬ್ ಖಾನ್ ಪರಿಚಯವಾಗಿದ್ದರು. ಆರೋಪಿಗಳು ಖೋಟಾ ನೋಟುಗಳನ್ನು ಪ್ರಿಯೇಶ್‌ನಿಂದ ತರಿಸಿಕೊಂಡು ನಗರದಲ್ಲಿ ಚಲಾವಣೆ ಮಾಡಲು ಯತ್ನಿಸಿದ್ದರು. ಪ್ರಿಯೇಶ್ ₹ 25 ಸಾವಿರ ಪಡೆದು, ಪ್ರತಿಯಾಗಿ ₹ 500 ಮುಖ ಬೆಲೆಯ ಒಂದು ಲಕ್ಷ ಮೌಲ್ಯದ ಖೋಟಾ ನೋಟು ನೀಡಲು ಒಪ್ಪಿದ್ದ. ಈ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಮುದ್ರಿಸಿದ್ದ ಖೋಟಾ ನೋಟುಗಳು ಅಸಲಿ ನೋಟಿನಂತೆಯೇ ತೋರುತ್ತಿದ್ದು ಬರಿಗಣ್ಣಿನಲ್ಲಿ ಪತ್ತೆಹಚ್ಚುವುದು ಬಹಳ ಕಷ್ಟ. ಗುಣಮಟ್ಟದ ಕಾಗದ ಹಾಗೂ ಶಾಯಿಯನ್ನು ಬಳಸಿ ನೋಟು ಮುದ್ರಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮಸುಂದರ್, ಪಿಎಸ್ಐಗಳಾದ ಸುದೀಪ್, ನರೇಂದ್ರ, ಎಎಸ್ಐ ಮೋಹನ್ ಕೆವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಶೀನಪ್ಪ ಮತ್ತಿತರ ಸಿಬಂದಿ ಪಾಲ್ಗೊಂಡಿದ್ದರು.
Mangalore Four arrested for fake note currencies printing by CCB police. 2.13 lakhs cash has been seized with mobile phones
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am