ಬ್ರೇಕಿಂಗ್ ನ್ಯೂಸ್
20-08-24 11:21 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 20: ಎರಡು ಕಾಲೇಜು ತಂಡಗಳ ನಡುವಿನ ಫುಟ್ಬಾಲ್ ಪಂದ್ಯಾಟದಲ್ಲಿ ಕಿರಿಕ್ ಉಂಟಾಗಿ ಒಂದು ತಂಡ ಐದಾರು ವಿದ್ಯಾರ್ಥಿಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಹಲ್ಲೆಗೈದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನದಲ್ಲಿ ಯೆನಪೋಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಆಗಸ್ಟ್ 14ರಂದು ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ, ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜುನೈದ್ ಎಂಬವರು ಯೆನಪೋಯ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ 19ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಮತ್ತಿತರರು ಸೇರಿ ಹಲ್ಲೆಗೈದಿದ್ದಾಗಿ ಮೊಹಮ್ಮದ್ ಶುರೈ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ಮತ್ತು ಪಡೀಲ್ ಗೆ ಕರೆದೊಯ್ದು ಹಲ್ಲೆ ನಡೆಸಿದ್ದಲ್ಲದೆ, ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾರೆ. ಮಂಗಳೂರು ನಗರದ ಎರಡು ಕಡೆ ಕರೆದೊಯ್ದು ಹಲ್ಲೆ ಕೃತ್ಯ ನಡೆಸಲಾಗಿದ್ದು ಹಲ್ಲೆ ಬಳಿಕ ವಿದ್ಯಾರ್ಥಿಗಳ ಪ್ಯಾಂಟ್ ಶರ್ಟ್ ತೆಗೆಸಿ ಒಳ ಚಡ್ಡಿಯಲ್ಲಿ ನಿಲ್ಲಿಸಿ ಬಸ್ಕಿ ತೆಗೆಸಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಆರೋಪಿಗಳು ಇದರ ವಿಡಿಯೋ ಮಾಡಿ ತಮ್ಮ ವಾಟ್ಸಪ್ ಗ್ರೂಪಿನಲ್ಲಿ ಷೇರ್ ಮಾಡಿದ್ದರು. ವಿಡಿಯೋ ಆಧರಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಇತರ ಆರೋಪಿಗಳಿಗೆ ಶೋಧ ನಡೆಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಕ್ಷಮೆ ಕೇಳುವಂತೆ ಹೇಳಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಆರೋಪಿಗಳ ಪೈಕಿ ದಿಯಾನ್ ಮತ್ತು ಸಲ್ಮಾನ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು 17 ವರ್ಷದ ಹುಡುಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Clash between two college students over a football tournament, three students were kidnapped and tortured the whole night. The miscrenats have also made the video go viral on social media. Pandeshwar Police have arrested two people in this case.
15-01-25 12:19 pm
HK News Desk
Hassan Accident, Mangalore: ಕ್ಯಾಂಟಿನ್ಗೆ ನುಗ್...
14-01-25 03:36 pm
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
15-01-25 12:09 pm
Mangaluru Correspondent
Mangalore News, Savayava Sante: ಫೆಬ್ರವರಿ ತಿಂಗ...
14-01-25 08:36 pm
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm