ಬ್ರೇಕಿಂಗ್ ನ್ಯೂಸ್
24-08-24 11:44 am Udupi Correspondent ಕ್ರೈಂ
ಉಡುಪಿ, ಆಗಸ್ಟ್ 24: ಬಿಯರ್ ನಲ್ಲಿ ಅಮಲು ಬರಿಸುವ ವಸ್ತುವನ್ನು ಸೇರಿಸಿ ಹಿಂದು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕೃತ್ಯ ಕಾರ್ಕಳದಲ್ಲಿ ನಡೆದಿದೆ. 21 ವರ್ಷದ ಬೋವಿ ಸಮುದಾಯದ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು ಅನ್ಯಕೋಮಿನ ವ್ಯಕ್ತಿ ಅತ್ಯಾಚಾರ ಎಸಗಿದ್ದಾಗಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಬಗ್ಗೆ ತ್ವರಿತವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಲ್ತಾಫ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್ಸ್ ಟಾ ಗ್ರಾಮ್ ನಲ್ಲಿ ಪರಿಚಯವಾಗಿದ್ದು, ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಕರೆದೊಯ್ದಿದ್ದ. ದೂರಿನ ಪ್ರಕಾರ, ಶುಕ್ರವಾರ ಬೆಳಗ್ಗೆ ಅಯ್ಯಪ್ಪ ನಗರ ಜೇನು ಕೃಷಿ ಸ್ಥಳದ ಬಳಿಯಿಂದ ಅಲ್ತಾಫ್ ಯುವತಿಯನ್ನು ಕೌಡೂರು ಗ್ರಾಮದ ರಂಗನಪಲ್ಕೆ ಕಾಡಿನ ಜಾಗಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿಗೆ ಇತರ ಇಬ್ಬರು ಕಾರಿನಲ್ಲಿ ಬಿಯರ್ ಬಾಟಲಿಗಳನ್ನು ತಂದಿದ್ದು, ಅದರಲ್ಲಿ ಅಮಲು ಬರಿಸುವ ಮಾತ್ರೆಗಳನ್ನು ಹಾಕಿ ಯುವತಿಗೆ ನೀಡಿದ್ದರು ಎನ್ನಲಾಗಿದೆ. ಯುವತಿಗೆ ಬಲಾತ್ಕಾರದಿಂದ ಬಿಯರ್ ಕುಡಿಸಿದ್ದು, ಯುವತಿ ಅಮಲಿನಲ್ಲಿದ್ದಾಗ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದೆ.
ಆದರೆ ಇದೊಂದು ಲವ್ ಜಿಹಾದ್ ಕೃತ್ಯವಾಗಿದ್ದು, ಯುವತಿಯನ್ನು ಪುಸಲಾಯಿಸಿ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹಿಂದು ಸಂಘಟನೆಗಳು ಆರೋಪಿಸಿದ್ದು, ಶುಕ್ರವಾರ ತಡರಾತ್ರಿ ಕಾರ್ಕಳ ಠಾಣೆಯ ಬಳಿ ನೂರಾರು ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ಪಡೆದ ನಂತರ ಕ್ರಮ ಜರುಗಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.
ಇಬ್ಬರ ಬಂಧನ - ಉಡುಪಿ ಎಸ್ಪಿ
ಇದೇ ವೇಳೆ, ಉಡುಪಿ ಎಸ್ಪಿ ಅರುಣ್ ಕುಮಾರ್ ಹೇಳಿಕೆ ನೀಡಿದ್ದು, ಪ್ರಕರಣ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂತ್ರಸ್ತ ಯುವತಿ ಮತ್ತು ಆರೋಪಿ ಮೂರು ತಿಂಗಳಿಂದ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಯುವತಿಯನ್ನು ಬರಹೇಳಿದ್ದು ಕಾರಿನಲ್ಲಿ ಅಪಹರಿಸಿದ್ದಾನೆ. ಮದ್ಯದಲ್ಲಿ ಏನೋ ಬೆರೆಸಿ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾಗಿ ಯುವತಿ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್ ಮತ್ತು ಆತನಿಗೆ ಬಿಯರ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತ ಯುವತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
21 year old kidnapped, drugged and raped in car at karkala in Udupi, two arrested. In a shocking incident near a house in Kukundoor, Ayyappa Nagar, a young woman was allegedly abducted by a group of four men, drugged, and sexually assaulted. The woman was later found in an unconscious state and was admitted to the Taluk Government Hospital.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am