ಬ್ರೇಕಿಂಗ್ ನ್ಯೂಸ್
26-08-24 12:43 pm Udupi Correspondent ಕ್ರೈಂ
ಉಡುಪಿ, ಆಗಸ್ಟ್ 26: ಕಾರ್ಕಳ ಯುವತಿಯ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಮಾದಕ ದ್ರವ್ಯ ಸೇವನೆ ಕುರಿತು ಸಂತ್ರಸ್ತೆ ಹಾಗೂ ಆರೋಪಿಗಳ ರಕ್ತದ ಪರೀಕ್ಷೆ ನಡೆಸಲಾಗಿದ್ದು, ಸಂತ್ರಸ್ತೆಯ ವರದಿಯಲ್ಲಿ ಪಾಸಿಟಿವ್ ಬಂದಿದೆ. ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ರಕ್ತದ ಮಾದರಿಯಲ್ಲಿ ಮಾದಕ ದ್ರವ್ಯ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆರೋಪಿ ಅಲ್ತಾಫ್‌ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆತ ತನ್ನ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಈ ಪುಡಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದು ಯಾವ ಮಾದರಿಯ ಮಾದಕ ದ್ರವ್ಯ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದರು.
ಯುವತಿಯ ರಕ್ತದಲ್ಲಿ ಕಂಡುಬಂದಿರುವ ಮಾದಕ ದ್ರವ್ಯ ಹಾಗೂ ಆರೋಪಿ ತೋರಿಸಿರುವ ಮಾದಕ ದ್ರವ್ಯ ಒಂದೇ ಆಗಿದೆಯೇ ಎಂಬುದನ್ನು ತುಲನೆ ಮಾಡಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮಾದಕ ದ್ರವ್ಯಕ್ಕೆ ಸಂಬಂಧಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಮಾದಕ ದ್ರವ್ಯವನ್ನು ಎಲ್ಲಿಂದ ತರಲಾಗಿದೆ ಮತ್ತು ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ. ನೊಂದ ಯುವತಿಯು ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಲು ಬಾಕಿ ಇದ್ದು, ಆಕೆ ಚೇತರಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಆ ಮೂಲಕ ಆದಷ್ಟು ಬೇಗ ಈ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
Karkala gang rape case, victim girl tested positive for consuming drugs says Udupi SP Arun. Accused Althaf had some powder kept in his car after which he has stated the girl to consume it. The Udupi JMFC court has remanded two of the accused in the gang rape case of a 21-year-old girl in Aiyyapana Nagara to police custody for four days.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm