ಬ್ರೇಕಿಂಗ್ ನ್ಯೂಸ್
28-08-24 10:39 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 28: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆಹಚ್ಚಿ 15 ಗ್ರಾಂ ಎಂಡಿಎಂಎ ನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿಯೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ ಕೆ.ಸಿ. ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆಹಚ್ಚಿ ಮಂಜೇಶ್ವರ ಬಡಾಜೆ ನಿವಾಸಿಗಳಾದ ಅಬ್ದುಲ್ ಸಲಾಂ @ ಸಲಾಂ(30), ಸೂರಜ್ ರೈ @ ಅಂಕಿ(26) ಎಂಬವರನ್ನು ಬಂಧಿಸಿದ್ದಾರೆ. ಅವರ ವಶದಿಂದ ರೂ.75,000 ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಎರಡು ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನ ಸ್ವಾಧೀನಪಡಿಸಲಾಗಿದೆ. ವಶಪಡಿಸಿದ ಸೊತ್ತಿನ ಮೌಲ್ಯ ರೂ. 1,65,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಅಬ್ದುಲ್ ಸಲಾಂ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಸೂರಜ್ ರೈ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
The CCB police have arrested two individuals who were involved in the transportation and sale of the banned drug MDMA. The police seized 15 grams of MDMA during the operation.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm