ಬ್ರೇಕಿಂಗ್ ನ್ಯೂಸ್
30-08-24 03:31 pm HK News Desk ಕ್ರೈಂ
ಬೆಳಗಾವಿ, ಆ 29: ಕಿರಾತಕರ ಗ್ಯಾಂಗ್‌ವೊಂದು ಸಿನಿಮೀಯ ರೀತಿಯಲ್ಲಿ ರಾತೋರಾತ್ರಿ ಪಟ್ಟಣ ಪಂಚಾಯತ್ ಸದಸ್ಯನ ಅಪಹರಣ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನ ಚೌಕಿಮಠ ಬಳಿ ಘಟನೆ ನಡೆದಿದೆ.
ಕಿತ್ತೂರು ಪಟ್ಟಣ ಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಆಗಿತ್ತು. ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಎಂಬಾತನನ್ನು ಕಾಂಗ್ರೆಸ್ ಸದಸ್ಯರು ಕಿಡ್ನ್ಯಾಪ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಸಂಬಂಧ ಅಶೋಕ್ ಮಾಳಗಿ, ಬಸವರಾಜ್ ಸಂಗೊಳ್ಳಿ, ಸುರೇಶ ಕಡೆಮನಿ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಮೂವರು ಸೇರಿ ನನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ನಾಗರಾಜ್ ತಂದೆ ಬಸವರಾಜ್ ಅಸುಂಡಿ ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೆಪ್ಟಂಬರ್ 3 ರಂದು ಕಿತ್ತೂರು ಪಟ್ಟಣ ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿತ್ತು.
ಕಿತ್ತೂರು ಪಟ್ಟಣ ಪಂಚಾಯತ್ ಬಿಜೆಪಿಯ 9 ಹಾಗೂ ಕಾಂಗ್ರೇಸ್ ನ 5 ಪಕ್ಷೇತರ 4 ಸದಸ್ಯರ ಬಲ ಹೊಂದಿದೆ. ಈ ವೇಳೆ ಬಿಜೆಪಿ ಸದಸ್ಯನ ಕಿಡ್ನ್ಯಾಪ್ ಮಾಡಿ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಸ್ಥಾನಕ್ಕೇರುವ ಪ್ಲಾನ್ ಮಾಡಿದ್ದರು. ಸದ್ಯ ನಾಗರಾಜ್‌ನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಬೆಳಗಾವಿ ಪೊಲೀಸರು ಕಿಡ್ನ್ಯಾಪ್ ಮಾಡಿದವರಿಗೆ ತಲಾಶ್ ನಡೆಸಲು ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ ಅವರು ಮೂರು ತಂಡಗಳ ರಚನೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಕಾರ್ಯಕರ್ತರು ತಡರಾತ್ರಿಯೇ ಕಿತ್ತೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ಬಿಜೆಪಿ ಸದಸ್ಯರೊಬ್ಬರ ಅಪಹರಣ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A BJP member of the Town Panchayat, Nagaraj Asundi, was kidnapped from the town on Thursday night in the wake of election for the posts of president and vice president to be held on September 3.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm