ಬ್ರೇಕಿಂಗ್ ನ್ಯೂಸ್
01-09-24 11:07 pm Mangalore Correspondent ಕ್ರೈಂ
ಮಂಗಳೂರು, ಸೆ.1: ಎರಡೂವರೆ ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ರೈಲಿನ ಮೂಲಕ ಕೇರಳಕ್ಕೆ ಒಯ್ಯಲು ಯತ್ನಿಸಿದ ಘಟನೆ ನಡೆದಿದ್ದು ದೂರು ಬಂದ ಎರಡೇ ಗಂಟೆಯೊಳಗೆ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಕೆಲಸ ಮಾಡಿಕೊಂಡಿದ್ದ ಕೂಲಿ ಕಾರ್ಮಿಕರ ಎರಡೂವರೆ ವರ್ಷದ ಹೆಣ್ಣು ಮಗು ಆಗಸ್ಟ್ 31 ರಂದು ಸಂಜೆ 4.30 ಗಂಟೆಗೆ ಕಾಣೆಯಾಗಿದ್ದು, ಎಲ್ಲ ಕಡೆ ಹುಡುಕಾಡಿ ಸಂಜೆ 7.30 ಗಂಟೆಗೆ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಕಂಕನಾಡಿ ನಗರ ಪೊಲೀಸರು ಎಲ್ಲ ಕಡೆ ಮಾಹಿತಿ ನೀಡಿ, ರೈಲ್ವೇ ಜಂಕ್ಷನ್ ಗೆ ಭೇಟಿ ನೀಡಿ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ವೃದ್ಧನೋರ್ವ ಮಗುವೊಂದನ್ನು ರೈಲಿನಲ್ಲಿ ಕರೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ್ದರು. ಕೇರಳ ಕಡೆಗೆ ಹೋಗುತ್ತಿದ್ದ ರೈಲಿನ ಬಗ್ಗೆ ಕಾಸರಗೋಡು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿ ಮಗುವಿನೊಂದಿಗೆ ವೃದ್ಧನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಕಂಕನಾಡಿ ಪೊಲೀಸ್ ನಿರೀಕ್ಷಕರ ತಂಡದ ಪಿ.ಎಸ್.ಐ.ಶಿವಕುಮಾರ್ ಮತ್ತು ಸಿಬ್ಬಂದಿಗಳು ರೈಲ್ವೇ ಪೊಲೀಸರಿಂದ ರಾತ್ರಿ 9.30 ಗಂಟೆಗೆ ವಶಕ್ಕೆ ಪಡೆದು ಹೆತ್ತವರಿಗೆ ಮಗುವನ್ನು ರಾತ್ರಿಯೇ ಒಪ್ಪಿಸಿರುತ್ತಾರೆ. ಆರೋಪಿಯನ್ನು ಎರ್ನಾಕುಲಂ ಜಿಲ್ಲೆಯ ಪರವೂರ್ ನಿವಾಸಿ ಅನೀಶ್ ಕುಮಾರ್ (49) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಗಲಾಟೆ ಮಾಡಿಕೊಂಡು ಮುಂಬೈಗೆ ತಾಯಿ ಬಳಿ ಹೋಗಿ ವಾಪಸ್ಸು ರೈಲಿನಲ್ಲಿ ಮಂಗಳೂರಿಗೆ ಬಂದಿದ್ದ ಆರೋಪಿ, ಪಡೀಲ್ ಸಸ್ಯವನ ಮುಂಭಾಗದ ರಸ್ತೆಯಲ್ಲಿ ಬರುತ್ತಿರುವಾಗ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ನೋಡಿದ್ದು, ತನಗೂ 3 ಗಂಡು ಮಕ್ಕಳಿದ್ದು, ಹೆಣ್ಣು ಮಗು ಸಾಕಬೇಕೆಂಬ ಉದ್ದೇಶದಿಂದ ಕರೆದುಕೊಂಡು ಹೋಗಿರುವುದಾಗಿ ತನಿಖೆಯಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.
ಕಂಕನಾಡಿ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಪಿಎಸೈ ಶಿವಕುಮಾರ್, ಎಎಸ್ಐ ಅಶೋಕ್, ಸಿಬ್ಬಂದಿಗಳಾದ ಆಶಿತ್ ಡಿಸೋಜ, ಕುಶಾಲ್ ಹೆಗ್ಡೆ, ರಾಘವೇಂದ್ರ, ಪೂಜಾ ರವರು ಮಾಹಿತಿ ಬಂದ ಎರಡು ಗಂಟೆಯೊಳಗೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.
In a swift operation, the Kankanady town police cracked a kidnapping case within two hours after a two-and-a-half-year-old child was abducted near the Botanical Garden of the Forest Department in Alape of Padil in city. The incident occurred on the evening of August 31.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm