ಬ್ರೇಕಿಂಗ್ ನ್ಯೂಸ್
02-09-24 12:56 pm Mangalore Correspondent ಕ್ರೈಂ
ಪುತ್ತೂರು, ಸೆ.2: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
2023 ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪಿಸಲಾಗಿದೆ. ದೌರ್ಜನ್ಯ ಎಸಗಿರುವ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಹೇಳಿದ್ದು IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ವಿರುದ್ಧ ರೆಬೆಲ್ ಆಗಿದ್ದ ಅರುಣ್ ಕುಮಾರ್ ಪುತ್ತಿಲ, ಪುತ್ತೂರಿನಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದು ಬಿಜೆಪಿಗೆ ತೀವ್ರ ಮುಖಭಂಗ ಆಗಿತ್ತು. ಬಿಜೆಪಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಹಿಂದುತ್ವದ ಹೆಸರಿನಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸಿದ್ದರಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ ಆಗಿತ್ತು.
ಪುತ್ತಿಲ ಅಭಿಮಾನಿಯಾಗಿ ಜಾಲತಾಣದಲ್ಲಿ ಫಾಲೋ ಮಾಡಿದ್ದೆ ಎಂದಿರುವ ಮಹಿಳೆ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೇಸು ದಾಖಲಾದ ಬಗ್ಗೆ ಅರುಣ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು ರಾಜಕೀಯ ಪ್ರೇರಿತ ಸುಳ್ಳು ದೂರು ಎಂದಿದ್ದಾರೆ. ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬಂಡಾಯ ಸಾರಿದ್ದ ಅರುಣ್ ಪುತ್ತಿಲ, ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ಸೇರಿದ್ದರು. ಅವರ ಬಿಜೆಪಿ ಸೇರ್ಪಡೆಗೆ ಪುತ್ತೂರಿನಲ್ಲಿ ಬಿಜೆಪಿ ನಾಯಕರೇ ವಿರೋಧಿಸಿದ್ದರು. ಅಲ್ಲದೆ, ಈ ಹಿಂದಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆಂಬಲಿಗರು ವಿರೋಧ ಹೊಂದಿದ್ದರು. ಹೀಗಾಗಿ ಪುತ್ತೂರಿನಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದು ಅರುಣ್ ಪುತ್ತಿಲ ವಿರುದ್ಧ ಸ್ವಪಕ್ಷೀಯರೇ ಪಿತೂರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
A sexual harassment case has been registered against Karnataka BJP leader Arun Kumar Puthila based on a complaint by a 47-year-old woman, police said. In her complaint, the woman alleges that the BJP leader sexually assaulted her at a Bengaluru hotel in June 2023. He took photos, selfies, and videos during the alleged assault and used them to blackmail her, the woman claimed.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm