ಬ್ರೇಕಿಂಗ್ ನ್ಯೂಸ್
03-09-24 08:40 pm Udupi Correspondent ಕ್ರೈಂ
ಉಡುಪಿ, ಸೆ.3: ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಹಪಾಠಿ ಯುವತಿ ನೀಡಿದ ದೂರಿನ ಮೇರೆಗೆ ಡ್ಯಾನಿಷ್ ಖಾನ್ ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಡ್ಯಾನಿಶ್ ಖಾನ್ ಉಡುಪಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ. ಅಲ್ಲಿ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದು ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ ಎಂದು ಉಲ್ಲೇಖಿಸಲಾಗಿದೆ.
ಮದುವೆ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಕ್ಕೆ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮಾಡಿ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Forced Conversion in Karnataka, Dr Mohammed Danish Khan arrested for forcing medical student to convert to Islam in Udupi.
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
14-01-25 08:36 pm
Mangalore Correspondent
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm