ಬ್ರೇಕಿಂಗ್ ನ್ಯೂಸ್
04-09-24 12:18 pm Bangalore Correspondent ಕ್ರೈಂ
ಬೆಂಗಳೂರು, ಸೆ 04: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದುವರೆಗಿನ ತನಿಖೆಯಲ್ಲಿ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಸೇರಿದಂತೆ 231 ಸಾಕ್ಷ್ಯಗಳನ್ನೊಳಗೊಂಡಂತೆ ಒಟ್ಟು 3,991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಮಾಹಿತಿ ನೀಡಿದರು.
ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಬೆಂಗಳೂರು ಪಶ್ಚಿಮ ವಲಯದ ಅಪರ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್.ಎಸ್ ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಎಸಿಪಿ ಚಂದನ್ ಕುಮಾರ್.ಎನ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ಈ ಚಾರ್ಜ್ಶೀಟ್ ಸಿದ್ಧಪಡಿಸಿದೆ. ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ.
ಮೂವರು ಪ್ರತ್ಯಕ್ಷ ಸಾಕ್ಷಿದಾರರು, ಎಫ್ಎಸ್ಎಲ್ ಹಾಗೂ ಸಿಎಫ್ಎಸ್ಎಲ್ ವರದಿಯ 8 ಸಾಕ್ಷಿಗಳು, ಸಿಆರ್ಪಿಸಿ 161 ಹಾಗೂ 164ರಡಿಯಲ್ಲಿ ದಾಖಲಿಸಲಾಗಿರುವ 27 ಜನರ ಹೇಳಿಕೆಗಳು, ಪಂಚರು 29, 8 ಜನ ಸರ್ಕಾರಿ ಅಧಿಕಾರಿಗಳು (ತಹಶೀಲ್ದಾರರು, ವೈದ್ಯರು ಹಾಗೂ ಆರ್.ಟಿ.ಓ ಅಭಿಯಂತರರು), 56 ಜನ ಪೊಲೀಸರು ಸೇರಿದಂತೆ ಒಟ್ಟು 231 ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Murder of Renukaswamy, police submit 3991 pages of chargesheet to court against actor Darshan and gang. The police have collected over 200 pieces of circumstantial evidence in the case, including forensic reports of bloodstains on the clothes of Darshan and other accused.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm