ಬ್ರೇಕಿಂಗ್ ನ್ಯೂಸ್
04-09-24 06:33 pm Mangalore Correspondent ಕ್ರೈಂ
ಬೆಳ್ತಂಗಡಿ, ಸೆ.4: ನಡುರಾತ್ರಿಯಲ್ಲಿ ಗೆಳತಿ ಮನೆಗೆ ಹೋಗಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ವಿಡಿಯೋ ಮಾಡಿ, ಎರಡು ಲಕ್ಷ ಹಣಕ್ಕಾಗಿ ಪೀಡಿಸಿದ ಘಟನೆ ನಡೆದಿದ್ದು ಪ್ರಕರಣದಲ್ಲಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಬಂಧಿತ ಆರೋಪಿ. ಪುತ್ತೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿ ಯುವಕನೊಬ್ಬ ಆಗಸ್ಟ್ 31 ರಂದು ಬೆಳ್ತಂಗಡಿಯ ಕರಾಯದ ಮಸೀದಿ ಬಳಿ ತನ್ನ ಬೈಕ್ ನಿಲ್ಲಿಸಿ ಗೆಳತಿ ಮನೆಗೆ ಹೋಗಿದ್ದರು. ನಸುಕಿನ ವೇಳೆ ತನ್ನ ಮನೆಗೆ ಹಿಂದಿರುಗುವ ಸಲುವಾಗಿ ಬೈಕಿನ ಬಳಿಗೆ ಬಂದಾಗ, ಸಂಶುದ್ದೀನ್ ಮತ್ತಾತನ ಸಂಗಡಿಗರು ವಿಡಿಯೋ ಚಿತ್ರೀಕರಣ ಮಾಡುತ್ತಾ ಪ್ರಶ್ನೆ ಮಾಡಿದ್ದಾರೆ.
ಬಳಿಕ ಸಮೀಪದ ಅಂಗಡಿ ಬಳಿಗೆ ಕರೆದೊಯ್ದು ನೀನು ಯಾರು ? ಯಾಕೆ ಇಲ್ಲಿಗೆ ಬಂದದ್ದು? ದರೋಡೆ ಮಾಡಲು ಬಂದಿದ್ದಾ? ಇಲ್ಲಿ ಮೊದಲು ಆಗಿದ್ದ ದರೋಡೆಯನ್ನು ನೀನೇ ಮಾಡಿದ್ದಾ ಎಂದೆಲ್ಲಾ ಪ್ರಶ್ನಿಸಿದ್ದಾರೆ. ತಾನು ದರೋಡೆಗೆ ಬಂದವನಲ್ಲ ಎಂದು ತಿಳಿಸಿದರೂ ಕೇಳದೆ, ನಾವು ಜನ ಮಾಡಿ ನಿನಗೆ ಹೊಡೆಯುತ್ತೇವೆ. ದರೋಡೆ ಮಾಡಲು ಯತ್ನಿಸಿದ್ದಾಗಿ ಪೊಲೀಸ್ ಇಲಾಖೆಗೆ ದೂರು ನೀಡುತ್ತೇವೆ ಎಂದೆಲ್ಲಾ ಬೆದರಿಸಿದ್ದಾರೆ. ನೀನು 2 ಲಕ್ಷ ಹಣ ಕೊಟ್ಟರೆ, ನಿನ್ನ ಮೇಲೆ ಕೇಸು ಇಲ್ಲದಾಗೆ ಮಾಡುತ್ತೇನೆ ಎಂದು ಹೇಳಿದ್ದು, ಭಯದಿಂದ ಹಣವನ್ನು ನಾಳೆ ಕೊಡುತ್ತೇನೆಂದು ಯುವಕ ತಿಳಿಸಿದ್ದ.
ಈ ವೇಳೆ ಆರೋಪಿತರು ಯುವಕನ ಕೈಯಲ್ಲಿದ್ದ ಬೈಕ್ ಕೀಯನ್ನು ಪಡೆದು ಹಣ ಕೊಟ್ಟ ಬಳಿಕ ಬೈಕ್ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಲು ಹೋದರೆ ನಿನ್ನ ಮೇಲೆ ಬೇರೆಯೇ ಕೇಸು ದಾಖಲಿಸಿ ಒಳಗೆ ಹಾಕಿಸುತ್ತೇವೆ ಎಂದು ಬೆದರಿಸಿದ್ದಾರೆ. ಆರೋಪಿ ತನ್ನ ಮೊಬೈಲ್ ನಂಬ್ರವನ್ನು ಯುವಕನಿಗೆ ನೀಡಿದ್ದು, ಆತ ನೀಡಿದ ನಂಬರಿಗೆ ಒಟ್ಟು 25 ಸಾವಿರ ರೂಪಾಯಿ ಹಣವನ್ನು ಗೂಗಲ್ ಪೇ ಮೂಲಕ ಜಮಾ ಮಾಡಿದ್ದರು. ಉಳಿಕೆ ಮೊತ್ತವಾದ 1,75,000 ರೂ.ವನ್ನು ಐದು ದಿನಗಳಲ್ಲಿ ಪಾವತಿಸಬೇಕು ಹಾಗೂ ಬೈಕ್ ದಾಖಲೆಗಳನ್ನು ಒದಗಿಸಬೇಕೆಂದು ಬೇಡಿಕೆ ಇಟ್ಟಿದ್ದ. ಇದರಿಂದ ಕಂಗೆಟ್ಟ ಸಂತ್ರಸ್ತ ಯುವಕ ಗೆಳೆಯರೊಡನೆ ಚರ್ಚಿಸಿ ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Youth arrested for Blackmail of girl by making video in Uppinangady.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm