ಬ್ರೇಕಿಂಗ್ ನ್ಯೂಸ್
09-12-20 05:48 pm Headline Karnataka News Network ಕ್ರೈಂ
ಕಲಬುರಗಿ, ಡಿ.9 : ಲಂಚ ಸ್ವೀಕಾರ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ ಇ ಸೆಲ್)ದಲ್ಲಿ ಡಿವೈಎಸ್ಪಿ ಆಗಿರುವ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ವಿಜಯಲಕ್ಷ್ಮೀ ಶಿಕ್ಷೆಗೆ ಗುರಿಯಾದವರು. ಇವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಮಾಡಿದ್ದಾರೆ.
ವಿಜಯಲಕ್ಷ್ಮಿ ಶಹಾಬಾದ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕಾರ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅವರು ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ಇ ಸೆಲ್)ದಲ್ಲಿ ಡಿವೈಎಸ್ಪಿಯಾಗಿದ್ದಾರೆ.
2015ರ ಡಿಸೆಂಬರ್ ತಿಂಗಳಲ್ಲಿ ಪೆಟ್ರೋಲ್ ಬಂಕ್ ಒಂದರಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ತೆರಳಿದಾಗ ಸಿಬ್ಬಂದಿ ಜತೆ ಜಗಳವಾಡಿದ್ದ ಆರೋಪದಲ್ಲಿ ರಾಜು ಎಂಬುವರ ವಿರುದ್ಧ ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜುನನ್ನು ಬಂಧಿಸಿ ಅವರ ವಾಹನವನ್ನು ಜಪ್ತಿ ಮಾಡಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ವಾಹನ ಬಿಡಿಸಿಕೊಳ್ಳಲು ಶಹಾಬಾದ್ ಠಾಣೆಗೆ ರಾಜು ಬಂದಿದ್ದರು. ಈ ವೇಳೆ, ವಿಜಯಲಕ್ಷ್ಮೀ 25 ಸಾವಿರ ರೂ. ಬೇಡಿಕೆ ಇಟ್ಟಿದ್ದರೆನ್ನಲಾಗಿತ್ತು. ರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರಿಂದ ದಾಳಿ ನಡೆಸಿದ್ದು ಹಣದ ಸಮೇತ ವಿಜಯಲಕ್ಷ್ಮೀ ಸಿಕ್ಕಿಬಿದ್ದಿದ್ದರು.
ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ವಿಜಯಲಕ್ಷ್ಮೀ ಅವರನ್ನು ವಶಕ್ಕೆ ಪಡೆದು, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿಕೊಟ್ಟಿದ್ದಾರೆ.
The District Principal and Special Session Court here on Tuesday sentenced a Deputy Superintendent of Police to four years' imprisonment and slapped a fine of Rs 10,000 for accepting a bribe.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm