ಬ್ರೇಕಿಂಗ್ ನ್ಯೂಸ್
14-09-24 06:54 pm Bengaluru correspondent ಕ್ರೈಂ
ಬೆಂಗಳೂರು, ಸೆ.14: ತಿಂಗಳಿಗೆ 30 ಲಕ್ಷ ಲಂಚ ಕೇಳಿದ್ದಲ್ಲದೆ, ಪತ್ನಿಯನ್ನು ತನ್ನ ಜೊತೆಗೆ ಮಲಗಲು ಕಳಿಸು ಎಂದು ಅವಾಚ್ಯವಾಗಿ ನಿಂದಿಸಿ ಎಫ್ಐಆರ್ ದಾಖಲಾಗುತ್ತಿದ್ದಂತೆ ಆಂಧ್ರಕ್ಕೆ ಎಸ್ಕೇಪ್ ಆಗಲು ಯತ್ನಿಸಿದ ಬೆಂಗಳೂರಿನ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬವರ ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವಯಾಲಿಕಾವಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಮುನಿರತ್ನ ಕೋಲಾರ ಮೂಲಕ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದರು. ಕೋಲಾರ ಮೂಲಕ ಕಾರಿನಲ್ಲಿ ತೆರಳುತ್ತಿದ್ದಾಗಲೇ ಖಚಿತ ಮಾಹಿತಿ ಪಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಘನತ್ಯಾಜ್ಯ ಗುತ್ತಿಗೆ ನೀಡುವ ವಿಚಾರದಲ್ಲಿ ತಿಂಗಳಿಗೆ 36 ಲಕ್ಷ ನೀಡಬೇಕೆಂದು ಶಾಸಕ ಮುನಿರತ್ನ ಡಿಮ್ಯಾಂಡ್ ಇಟ್ಟಿದ್ದು ಅಷ್ಟು ಹಣ ಇಲ್ಲವೆಂದು ಗುತ್ತಿಗೆದಾರ ಬೇಡಿಕೊಳ್ಳುವ ಆಡಿಯೋ ವೈರಲ್ ಆಗಿತ್ತು. ಇದು ಮಾಧ್ಯಮದಲ್ಲಿ ಬರುತ್ತಿದ್ದಂತೆ ಮುನಿರತ್ನ ವಿರುದ್ಧ ಆಕ್ರೋಶ ಕೇಳಿಬಂದಿತ್ತು. ಆನಂತರ, ಸ್ವತಃ ಗುತ್ತಿಗೆದಾರನೇ ಶಾಸಕ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯಕುಮಾರ್, ಕಾರ್ಯದರ್ಶಿ ಅಭಿಷೇಕ್, ಶಾಸಕರ ಆಪ್ತ ವಸಂತ ಕುಮಾರ್ ವಿರುದ್ಧ ವಯ್ಯಾಲಿಕಾವಲ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಹೊಲೆಯನ ರೀತಿ ಮಾಡ್ತಿದ್ದೀಯಲ್ಲಾ ಎಂದು ಜಾತಿ ನಿಂದನೆ ಮಾಡಿರುವುದೂ ಆಡಿಯೋದಲ್ಲಿತ್ತು. ಈ ಬಗ್ಗೆ ಅದೇ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಶಾಸಕನನ್ನು ಬಂಧಿಸಿದ್ದಾರೆ.
Karnataka BJP MLA Munirathna was arrested in Kolar on Saturday on charges of making a death threat to a contractor and using casteist slurs against him. Two FIRs were filed against Munirathna, an MLA from Rajarajeshwari Nagar in Bengaluru, based on complaints filed by Chelvaraju, who accused the BJP leader of harassing and threatening him
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm