ಬ್ರೇಕಿಂಗ್ ನ್ಯೂಸ್
24-09-24 08:26 pm Mangalore Correspondent ಕ್ರೈಂ
ಮಂಗಳೂರು, ಸೆ.24: ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೈಶಾಚಿಕ ಕ್ರೌರ್ಯ ಮೆರೆದಿದ್ದ ಆರೋಪಿ ದಂಪತಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ.
ಚಿಟ್ ಫಂಡ್ ಹಣ ಕೇಳಲು ಹೋಗಿದ್ದ ಮಂಗಳೂರಿನ ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕೊಲೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಜೋನಸ್ ಸ್ಯಾಮ್ಸನ್ ಮತ್ತು ಪತ್ನಿ ವಿಕ್ಟೀರಿಯಾ ಅವರ ಆರೋಪ ಸಾಬೀತಾಗಿತ್ತು. ಇದೀಗ ಆರೋಪಿ ದಂಪತಿಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರು. ದಂಡ ವಿಧಿಸಿದ್ದಾರೆ. ಕೊಲೆಗೆ ಸಹಕರಿಸಿದ್ದ ಮೂರನೇ ಆರೋಪಿ ರಾಜುಗೆ ಆರುವರೆ ತಿಂಗಳು ಸಾದಾ ಸಜೆ ಮತ್ತು 5000 ರು. ದಂಡ ವಿಧಿಸಲಾಗಿದೆ. ಈಗಾಗಲೇ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಿರುವ ರಾಜು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಸಂತ್ರಸ್ತರ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೆಟ್ ಕ್ರಾಸ್ತಾ ವಾದ ಮಂಡಿಸಿದ್ದರು.
2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಮೈಯಲ್ಲಿದ್ದ ಚಿನ್ನಾಭರಣ ಲೂಟಿ ಮಾಡಿದ್ದ ದಂಪತಿ ಆನಂತರ, ಆಕೆಯ ದೇಹವನ್ನು ಕತ್ತರಿಸಿ 29 ತುಂಡುಗಳನ್ನಾಗಿಸಿ ನಗರದ ವಿವಿಧೆಡೆ ಕಸದ ರಾಶಿಗೆ ಎಸೆದು ಬಂದಿದ್ದ. ನಾಯಿಗಳು ದೇಹದ ತುಂಡುಗಳನ್ನು ಹೊರಗೆಳೆದು ತಂದಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು. ಪಾಂಡೇಶ್ವರ ಮತ್ತು ಕದ್ರಿ ಪೊಲೀಸರು ತನಿಖೆ ನಡೆಸಿ ಆರೋಪಗಳನ್ನು ಬಂಧಿಸಿದ್ದರು. ನ್ಯಾಯಾಲಯದಲ್ಲಿ ಪೊಲೀಸರು ಒದಗಿಸಿದ್ದ 48 ಸಾಕ್ಷಿದಾರರ ವಿಚಾರಣೆ ನಡೆಸಿದ್ದು 141 ದಾಖಲೆಗಳನ್ನು ಆಧರಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
In a major verdict today, the Mangaluru First Additional District and Sessions Court, under Judge Mallikarjuna Swamy H.S., sentenced two accused in the high-profile 2019 murder of Shrimati Shetty to life imprisonment. The convicted individuals, Jonas Samson and his wife Victoria Mathias, were awarded life imprisonment for brutally murdering Shrimati Shetty, a chit-fund operator from Attavar.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm