ಬ್ರೇಕಿಂಗ್ ನ್ಯೂಸ್
26-09-24 02:41 pm Bangalore Correspondent ಕ್ರೈಂ
ಬೆಂಗಳೂರು, ಸೆ.26: ನೇಪಾಳ ಮೂಲದ ಮಹಾಲಕ್ಷ್ಮಿ ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟ ಮುಕ್ತಿರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಸಾಯುವುದಕ್ಕೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್ ಪಕ್ಕದಲ್ಲೇ ಪತ್ತೆಯಾಗಿದ್ದು ಕೊಲೆಯ ಹಿಂದಿನ ಕಾರಣವನ್ನು ತಿಳಿಸಿದ್ದಾನೆ. ಆರೋಪಿ ಆಕ್ಸೋ ಬ್ಲೇಡ್ ಬಳಸಿ ಆಕೆಯ ದೇಹವನ್ನು ಸುಮಾರು 50ಕ್ಕೂ ಅಧಿಕ ತುಂಡುಗಳನ್ನಾಗಿ ಕತ್ತರಿಸಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಬೆಂಗಳೂರಿನ ವಯ್ಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿಯನ್ನು ಕೊಲೆ ಮಾಡಿದ ನಂತರ ಒಡಿಶಾ ರಾಜ್ಯದ ತನ್ನ ಊರು ಭುಯಿನ್ ಪುರ ಗ್ರಾಮಕ್ಕೆ ತೆರಳಿದ್ದ ಮುಕ್ತಿ ರಂಜನ್ ರಾಯ್ ಪೊಲೀಸರು ಬೆನ್ನು ಬಿದ್ದಿದ್ದಾರೆಂದು ತಿಳಿದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಶವದ ಪಕ್ಕದಲ್ಲಿಯೇ ಡೈರಿ ಸಿಕ್ಕಿದ್ದು ಅದರಲ್ಲಿ ವಿವರವಾದ ಮಾಹಿತಿ ಬರೆದಿಟ್ಟಿದ್ದಾನೆ. ತಾನು ಕೆಲಸ ಮಾಡುತ್ತಿದ್ದ ಮಾಲ್‌ನಲ್ಲಿ ಸ್ಟೋರ್ ಮ್ಯಾನೇಜರ್ ಆಗಿದ್ದ ಮಹಾಲಕ್ಷ್ಮಿ, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಇದರಿಂದ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆದಿತ್ತು. ಅಲ್ಲದೆ, ಕೆಲಸದ ಸ್ಥಳದಲ್ಲಿ ಇತರ ಯುವತಿಯರೊಂದಿಗೆ ಮಾತನಾಡಬೇಡ ಎಂದು ಮಹಾಲಕ್ಷ್ಮಿ ತಾಕೀತು ಮಾಡುತ್ತಿದ್ದಳು. ಅವಳ ನಡವಳಿಕೆ ಮತ್ತು ಬಯಕೆಗಳಿಂದ ಬೇಸತ್ತಿದ್ದೆ ಎಂದು ಬರೆದಿದ್ದಾನೆ.


ಅಲ್ಲದೆ, ಡೆತ್ ನೋಟ್‌ನಲ್ಲಿ ತಾನೇ ಮಹಾಲಕ್ಷ್ಮಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಸೆ.3ರಂದು ನಡೆದ ತೀವ್ರ ವಾಗ್ವಾದದ ಸಮಯದಲ್ಲಿ ಮಹಾಲಕ್ಷ್ಮಿ ಮುಕ್ತಿ ರಂಜನ್‌ನನ್ನು ಅಪಮಾನ ಮಾಡಿದ್ದಳು. ಇದರಿಂದ ಕೋಪಗೊಂಡು ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಮಹಾಲಕ್ಷ್ಮಿ ಜೊತೆಗಿನ ತನ್ನ ಆತ್ಮೀಯ ಸಂಬಂಧದ ಬಗ್ಗೆ ವಿವರಿಸಿ, ಅಪರಾಧಕ್ಕೆ ವಿಷಾದ ವ್ಯಕ್ತಪಡಿಸಿದ್ದಾನೆ. ಕೊಲೆಗೆ ಹರಿತವಾದ ಬ್ಲೇಡ್ ಬಳಸಿದ್ದಾಗಿ ಡೆತ್ ನೋಟ್‌ನಲ್ಲಿ ತಿಳಿಸಿದ್ದಾನೆ.
ಮಹಾಲಕ್ಷ್ಮಿ ಕೊಲೆಯ ನಂತರ, ಮುಕ್ತಿ ರಂಜನ್ ಬೆಂಗಳೂರಿನಿಂದ ಪರಾರಿಯಾಗಿದ್ದ. ಸೆ.3ರಿಂದಲೇ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಕೊಲೆ ವಿಷಯ ತಿಳಿಯುತ್ತಲೇ ಪೊಲೀಸರು ಶಂಕಿತ ಆರೋಪಿಗಳ ಬೆನ್ನು ಬಿದ್ದಿದ್ದು ಮುಕ್ತಿರಂಜನ್ ಪಶ್ಚಿಮ ಬಂಗಾಳಕ್ಕೆ ತೆರಳಿ, ಅಲ್ಲಿಂದ ಮತ್ತೆ ಒಡಿಶಾಗೆ ಹೋಗಿರುವುದನ್ನು ಪತ್ತೆಹಚ್ಚಿದರು. ಪೊಲೀಸರು ಆತನಿದ್ದ ಸ್ಥಳಕ್ಕೆ ಹೋಗುವ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ಹತ್ತಾರು ಅನುಮಾನ, ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ.
The man suspected of murdering a woman whose chopped-up body was found inside a fridge at her home in Bengaluru was found dead in Odisha. A suicide note was found near the body of Mukti Ranjan Roy who had fled Bengaluru days ago, eluding investigators who had been closing in on him.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm